ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಗ್ರಾಚ್ಯುಟಿ ಪಡೆಯಲು ಅರ್ಹ -ಸುಪ್ರೀಂಕೋರ್ಟ್

ನವದೆಹಲಿ : ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಗ್ರಾಚ್ಯುಟಿ ಪಡೆಯಲು ಅರ್ಹ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.

ಅಂಗನವಾಡಿಗಳು ಶಾಸನಬದ್ಧ ಕರ್ತವ್ಯವನ್ನು ನಿರ್ವಹಿಸುತ್ತಿದ್ದು,ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಗ್ರಾಚ್ಯುಟಿ ಪಾವತಿ ಕಾಯ್ದೆ 1972 ರ ಅಡಿಯಲ್ಲಿ ಗ್ರಾಚ್ಯುಟಿ ಪಡೆದುಕೊಳ್ಳಲು ಅರ್ಹ ಎಂದು ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.

ಅಂಗನವಾಡಿ ಕೇಂದ್ರಗಳಲ್ಲಿ ಕೆಲಸ ಮಾಡಲು ನೇಮಕಗೊಂಡ ಕಾರ್ಯಕರ್ತೆಯರು 1972 ರ ಕಾಯ್ದೆಯಡಿ ಅರ್ಹರಾಗಿದ್ದಾರೆಯೇ ಎಂದು ಸಲ್ಲಿಸಲಾದ ಅರ್ಜಿಗಳ ವಿಚಾರಣೆ ವೇಳೆ ಕೋರ್ಟ್ ಈ ಅನಿಸಿಕೆ ವ್ಯಕ್ತಪಡಿಸಿದೆ.

ಗ್ರಾಚ್ಯುಟಿ ಅಂದರೆ ಐದು ಅಥವಾ ಅದಕ್ಕಿಂತಲೂ ಹೆಚ್ಚು ವರ್ಷಗಳ ಕಾಲ ಒಂದೇ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ ನೌಕರರಿಗೆ ಅವರ ಸೇವಾವಧಿಯನ್ನು ಮಾನದಂಡವಾಗಿಟ್ಟುಕೊಂಡು ನೀಡುವ ಗೌರವ ಧನವಾಗಿದೆ.ಆದರೆ ಗ್ರಾಚ್ಯುಟಿಯ ಪ್ರಯೋಜನ ಐದು ವರ್ಷಗಳಿಗಿಂತ ಕಡಿಮೆ ಅವಧಿಯ ಸೇವೆಯ ಮೇಲೆ ಸಹ ಲಭ್ಯವಿದೆ.

Leave A Reply

Your email address will not be published.