ಅಲ್ಪಸಂಖ್ಯಾತ ಶಾಲೆಯಲ್ಲಿ ಧರ್ಮದ ಬೋಧನೆ ನಿಷೇಧ – ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಅಲ್ಪಸಂಖ್ಯಾತ ಶಾಲೆಯಲ್ಲಿ ಧರ್ಮದ ಬೋಧನೆ ನಿಷೇಧಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅವರು, ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಕ್ರೈಸ್ತ ಶಿಕ್ಷಣ ಸಂಸ್ಥೆಗಳ ಮೇಲೆ ನಿಗಾ ಇಡಲಾಗುವುದು. ಎಲ್ಲ ಬಿಇಓಗಳಿಗೆ ಈ ಬಗ್ಗೆ ಪರಿಶೀಲಿಸಲು ಸೂಚಿಸುವುದಾಗಿ ವಿಧಾನಸೌಧದಲ್ಲಿ ತಿಳಿಸಿದರು.

ಶಾಲೆಯ ನೇಮಕಾತಿ ಸಂದರ್ಭದಲ್ಲಿ ಬೈಬಲ್‌ಗೆ ಒಪ್ಪಿಗೆ ಇದೆಯೇ ಎಂದು ಕೇಳುತ್ತಿರುವ ಮಾಹಿತಿ ಇದೆ. ಒಪ್ಪಿಗೆ ಇಲ್ಲ ಅಂದರೆ ಪ್ರವೇಶ ಕೊಡುವುದಿಲ್ಲ ಎಂಬುವುದು ತಪ್ಪು. ಅದಕ್ಕೆ ಅವಕಾಶ ನೀಡದಂತೆ ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳುವುದು ಎಂದರು.

ರಾಜ್ಯದ ಎಲ್ಲ ಕ್ರೈಸ್ತ ಶಿಕ್ಷಣ ಸಂಸ್ಥೆಗಳ ಪಠ್ಯ ಪರಿಶೀಲನೆಗೆ ಸೂಚನೆ ನೀಡುವುದಾಗಿಯೂ ತಿಳಿಸಿದರು. ಕ್ಲಾರೆನ್ಸ್ ಶಾಲೆಯಲ್ಲಿ ಬೈಬಲ್ ವಿಚಾರ ಕುರಿತ ಪ್ರಶ್ನೆಗೆ, ಧರ್ಮದ ಆಧಾರದ ಮೇಲೆ ಸಮಾಜ ಒಡೆಯುತ್ತಿದ್ದಾರೆ. ಹೀಗಂತ ಬೇರೆ ಪಕ್ಷದವರು ಮಾತನಾಡುತ್ತಿದ್ದರು. ಈಗ ಅವರೆಲ್ಲರು ಎಲ್ಲಿಗೆ ಹೋದರು ಎಂದು ವ್ಯಂಗ್ಯವಾಡಿದರು.

Leave A Reply

Your email address will not be published.