ಅತಿ ಚಿಕ್ಕ ವಯಸ್ಸಿನಲ್ಲೇ ಮಕ್ಕಳನ್ನು ಶಾಲೆಗೆ ಕಳುಹಿಸಬೇಡಿ; ಸುಪ್ರೀಂ ಕೋರ್ಟ್ ನಿಂದ ಮಹತ್ವದ ಹೇಳಿಕೆ

ಪಾಲಕರು ತಮ್ಮ ಮಕ್ಕಳಿಗೆ ಎರಡು ವರ್ಷ ಆದ ಕೂಡಲೇ ಶಾಲೆಗೆ ಕಳಿಸಬೇಕೆಂದು ಬಯಸುತ್ತಾರೆ, ಆದರೆ ಇದು ಮಕ್ಕಳ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎಂ.ಎಂ. ಸುಂದರೇಶ್ ಅವರಿದ್ದ ಪೀಠ ಪ್ರತಿಕ್ರಿಯಿಸಿದೆ.

ಹಿಂದಿನಿಂದ ರೂಢಿಯ ಪ್ರಕಾರ ಒಂದನೇ ತರಗತಿ ಪ್ರವೇಶಕ್ಕೆ ವಯೋಮಿತಿ ಐದು ವರ್ಷವಾಗಿತ್ತು. ಮಕ್ಕಳನ್ನು ಶಾಲೆಗೆ ಕಳುಹಿಸಲು ಸರಿಯಾದ ವಯಸ್ಸು ಯಾವುದು ಎಂಬ ಬಗ್ಗೆ ಅಧ್ಯಯನ ನಡೆಸಲಾಗಿದೆ ಎಂದು ವಿಚಾರಣೆ ವೇಳೆ ನ್ಯಾಯಾಲಯ ಹೇಳಿದೆ. ಮಕ್ಕಳನ್ನು ಶಾಲೆಗೆ ಕಳುಹಿಸಲು ಒತ್ತಾಯಿಸಬೇಡಿ, ಇದು ಅವರ ಆರೋಗ್ಯದ ಮೇಲೆ ಆಳವಾದ ಪರಿಣಾಮ ಬೀರಬಹುದು ಎಂದು ಪೋಷಕರಿಗೆ ಸಲಹೆ ನೀಡಿದೆ.

ಹಾಗಾಗಿ ಮಕ್ಕಳ ಶಾಲಾ ಪ್ರವೇಶ ಕುರಿತಂತೆ ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯವೊಂದನ್ನು ದಾಖಲಿಸಿದೆ. ಕೇಂದ್ರೀಯ ವಿದ್ಯಾಲಯಗಳಲ್ಲಿ ಒಂದನೇ ತರಗತಿಗೆ ಪ್ರವೇಶ ಪಡೆಯಲು ಕನಿಷ್ಠ ಆರು ವರ್ಷ ವಯಸ್ಸಿನ ಮಾನದಂಡ ರೂಪಿಸಿರುವುದನ್ನು ಪ್ರಶ್ನಿಸಿ ಪೋಷಕರು ಸಲ್ಲಿಸಿದ ಮೇಲ್ಮನವಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿದೆ, ಈ ವೇಳೆ ತನ್ನ ಅಭಿಪ್ರಾಯ ವ್ಯಕ್ತಪಡಿಸಿದೆ.

Leave A Reply

Your email address will not be published.