ಬ್ರಹ್ಮಾವರ: ಜೀವನದಲ್ಲಿ ಜಿಗುಪ್ಸೆಗೊಂಡು ಹೋಟೆಲ್ ರೂಮ್ ನಲ್ಲಿ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದು ನೌಕರ ಆತ್ಮಹತ್ಯೆ

ಬ್ರಹ್ಮಾವರ:ಹೋಟೆಲ್ ನಲ್ಲಿ ರೂಮ್ ಬಾಯ್ ಆಗಿ ಕೆಲಸ ಮಾಡುತ್ತಿದ್ದ ನೌಕರ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಚ್ಚುಲು ಗ್ರಾಮದ ಕೊಳವಿನ ಬಾಗಿಲಿನಲ್ಲಿ ನಡೆದಿದೆ.

ಆತ್ಮಹತ್ಯೆ ಗೆ ಶರಣಾದ ವ್ಯಕ್ತಿಯನ್ನು 34 ವರ್ಷದ ಭಾಸ್ಕರ್ ಪೂಜಾರಿ ಎಂದು ಗುರುತಿಸಲಾಗಿದೆ.

ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಇವರು ಜೀವನದಲ್ಲಿ ಜಿಗುಪ್ಸೆಗೊಂಡು ಏಪ್ರಿಲ್ 26 ರ ಬೆಳಗ್ಗೆ ತಾನು ರೂಮ್ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಬ್ರಹ್ಮಾವರದ ಆಶ್ರಯ ಹೋಟೆಲ್ ನಲ್ಲಿ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.