MESCOM ನಲ್ಲಿ ಉದ್ಯೋಗವಕಾಶ : 183 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್
(MESCOM) ನ ಹೆಚ್‌ಆರ್‌ಡಿ ಕೇಂದ್ರವು ಗ್ರಾಜ್ಯುಯೇಟ್ ಅಪ್ರೆಂಟಿಸ್, ಟೆಕ್ನಿಷಿಯನ್ ಡಿಪ್ಲೊಮ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಗ್ರಾಜುಯೇಟ್ ಅಪ್ರೆಂಟಿಸ್ (ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್) – 112
ಟೆಕ್ನಿಷಿಯನ್ ಡಿಪ್ಲೋಮಾ ಅಪ್ರೆಂಟಿಸ್ (ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್)-71

ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ – 25-05-2022
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 10-06-2022
ಮೆಸ್ಕಾಂ ವೆಬ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ
15-06-2022
ಶಾರ್ಟ್ ಲಿಸ್ಟ್ ಬಿಡುಗಡೆ ದಿನಾಂಕ : 20-06-2022
ಮೂಲ ದಾಖಲೆಗಳ ಪರಿಶೀಲನೆ ದಿನಾಂಕ : 27-06-2022& 28-06-2022

ವಯೋಮಿತಿ ಅರ್ಹತೆಗಳು : ಕೇಂದ್ರೀಯ ಅಪ್ರೆಂಟಿಸ್ ನಿಯಮಗಳ ಪ್ರಕಾರ ಅನ್ವಯವಾಗಲಿದೆ.

ವಿದ್ಯಾರ್ಹತೆ : ಹುದ್ದೆಗಳಿಗೆ ಅನುಗುಣವಾಗಿ ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ಇಂಜಿನಿಯರಿಂಗ್ / ಡಿಪ್ಲೊಮ್ ಪಾಸ್ ಮಾಡಿರಬೇಕು.

ಆಯ್ಕೆ ಪ್ರಕ್ರಿಯೆ ಹೇಗೆ?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನಿಗದಿಪಡಿಸಿದ
ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಿ, ಪರ್ಸನಾಲಿಟಿ ಟೆಸ್ಟ್ ಮತ್ತು ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

Leave A Reply

Your email address will not be published.