ಸದ್ಯದಲ್ಲೇ ರಾಜ್ಯದ ಜನತೆಗೆ ಕಾದಿದೆ ಮತ್ತೊಂದು ಶಾಕ್ !! | ನಂದಿನಿ ಹಾಲಿನ ದರ 3 ರೂ. ಹೆಚ್ಚಳಕ್ಕೆ ಮನವಿ

ರಾಜ್ಯದ ಜನತೆಗೆ ಸದ್ಯದಲ್ಲೇ ಶಾಕಿಂಗ್ ನ್ಯೂಸ್ ಒಂದು ಕಾದಿದೆ. ಶೀಘ್ರದಲ್ಲೇ ನಂದಿನಿ ಹಾಲಿನ ದರ ಹೆಚ್ಚಾಗಲಿದೆ. ಹಾಲಿನ ಸಂಸ್ಕರಣೆ, ಕಚ್ಚಾ ಸಾಮಗ್ರಿಗಳು, ವಿದ್ಯುತ್, ಸಾಗಾಣಿಕಾ ವೆಚ್ಚ ಸೇರಿದಂತೆ ಬಹುತೇಕ ಎಲ್ಲ ವೆಚ್ಚಗಳು ಶೇ.30 ರಷ್ಟು ಹೆಚ್ಚಾಗಿವೆ. ಇದನ್ನು ಪರಿಗಣಿಸಿ ರೈತರಿಗೆ ಹೆಚ್ಚುವರಿ ದರ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಹಾಲಿನ ದರವನ್ನು ಹೆಚ್ಚಳ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.

ಅಮೂಲ್‌ ಸೇರಿದಂತೆ ದೇಶದ ವಿವಿಧ ಸಹಕಾರಿ ಮತ್ತು ಖಾಸಗಿ ಸಂಸ್ಥೆಗಳು ಹಾಲಿನ ಮಾರಾಟ ದರವನ್ನು ಹೆಚ್ಚಿಸಿವೆ. ನಂದಿನಿ ಹಾಲಿನ ಮಾರಾಟ ದರಕ್ಕೆ ಹೋಲಿಕೆ ಮಾಡಿದರೆ ಇತರೆ ಸಂಸ್ಥೆಗಳ ದರವು ಪ್ರತಿ ಲೀಟರ್‌ಗೆ 8ರಿಂದ 10 ರೂ. ಹೆಚ್ಚಿದೆ. ಹೀಗಾಗಿ ನಂದಿನಿ ಹಾಲಿನ ಮಾರಾಟ ದರವನ್ನು ಕನಿಷ್ಠ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸಲು ಕ್ರಮಕೈಗೊಳ್ಳಬೇಕು. ಇದರಿಂದ ಹಾಲು ಉತ್ಪಾದಕರಿಗೆ ಕನಿಷ್ಠ 2 ರೂ. ಮತ್ತು ಹಾಲು ಉತ್ಪಾದಕರ ಸಹಕಾರಿ ಸಂಘ, ಹಾಲು ಒಕ್ಕೂಟ ಹಾಗೂ ಹಾಲು ಮಾರಾಟಗಾರರಿಗೆ 1 ರೂ. ನೀಡಲು ಸಹಕಾರಿಯಾಗಲಿದೆ ಎಂದು ಪತ್ರ ಬರೆದು ಮುಖ್ಯಮಂತ್ರಿಯವರನ್ನು ಕೋರಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಕೆಎಂಎಫ್ ಅಧ್ಯಕ್ಷರು, ಪ್ರತಿ ಲೀಟರ್ ಹಾಲಿಗೆ ಕನಿಷ್ಠ 3 ರೂ.ಗಳನ್ನು ಹೆಚ್ಚಳ ಮಾಡುವಂತೆ ಸಿಎಂ ಬಸವರಾಜ್ ಬೊಮ್ಮಾಯಿಯವರಿಗೆ ಕೋರಿದ್ದಾರೆ. ಪ್ರಮುಖ ಹಾಲು ಉತ್ಪಾದನಾ ಸಂಸ್ಥೆಗಳಾದ ಅಮೂಲ್ ಸೇರಿದಂತೆ ದೇಶದ ವಿವಿಧ ಸಹಕಾರ ಮತ್ತು ಖಾಸಗಿ ಸಂಸ್ಥೆಗಳ ಹಾಲಿನ ಮಾರಾಟ ದರವನ್ನು ಈಗಾಗಲೇ ಹೆಚ್ಚಿಸಿವೆ. ನಂದಿನಿ ಹಾಲಿನ ಮಾರಾಟ ದರಕ್ಕೆ ತುಲನೆ ಮಾಡಿದಾಗ ಇತರೇ ಸಂಸ್ಥೆಗಳ ದರವು ಪ್ರತಿ ಲೀಟರ್‍ಗೆ 8 ರಿಂದ 10 ರೂ.ಗೆ ಹೆಚ್ಚಳವಿದೆ.

ರಾಜ್ಯದಲ್ಲಿ 14 ಹಾಲು ಸಹಕಾರ ಸಂಘಗಳಿದ್ದು, 2019-20ರಲ್ಲಿ 16,440.74 ಕೋಟಿ ವಹಿವಾಟು ನಡೆಸಿದ್ದು, ಈ ವರ್ಷ 19,732 ಕೋಟಿ ರೂ.ಗೆ ಏರಿಕೆಯಾಗಿದದ್ದು, ಸರಿಸುಮಾರು ಶೇ.20 ರಷ್ಟು ಏರಿಕೆಯಾಗಿದೆ. ನಾವು ಮುಂದಿನ ವರ್ಷ 25 ಶೇಕಡಾ ಹೆಚ್ಚಳವನ್ನು ನೋಡುತ್ತಿದ್ದೇವೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ.

Leave A Reply

Your email address will not be published.