ಆರೋಗ್ಯ ಇಲಾಖೆಯಿಂದ ಗುತ್ತಿಗೆ ಆಧಾರದ ಕೊರೊನಾ ವಾರಿಯರ್ಸ್ 6 ತಿಂಗಳು ಮುಂದುವರಿಸಲು ನಿರ್ಧಾರ-ಡಾ.ಕೆ.ಸುಧಾಕರ್
ಬೆಂಗಳೂರು: ಗುತ್ತಿಗೆ ಆಧಾರದ ಮೇಲೆ ತೆಗೆದುಕೊಳ್ಳಲಾಗಿದ್ದ ಕೋವಿಡ್ ವಾರಿಯರ್ಸ್ ( ಅವಧಿಯನ್ನು 18 ತಿಂಗಳವರೆಗೆ ಮುಂದುವರೆಸಿಕೊಂಡು ಹೋಗಿದ್ದೇವೆ. ಕೋವಿಡ್ ಇಲ್ಲದೇ ಇದ್ದ ಕಾರಣ 18 ತಿಂಗಳವರೆಗೆ ಮುಂದುವರೆಸಿದ್ದೆವು. ಈ ಮತ್ತೆ ಆರ್ಥಿಕ ಇಲಾಖೆಗೆ ಪತ್ರ ಬರೆದು ಅವರ ಅವಧಿಯನ್ನು ಇನ್ನೂ 6 ತಿಂಗಳು ಮುಂದುವರೆಸಲು ಕೇಳಿದ್ದೇವೆ ಎಂಬುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಈ ಮೂಲಕ ಗುತ್ತಿಗೆ ಆಧಾರದಲ್ಲಿ ಕೊರೋನಾ ಸಂದರ್ಭದಲ್ಲಿ ನೇಮಕಗೊಂಡಿದ್ದಂತ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಿಎಂ ಮಂಗಳೂರು ಪ್ರವಾಸ ರದ್ದಾಗಿದೆ. ಹಾಗಾಗಿ ಗೃಹ ಕಛೇರಿ ಕೃಷ್ಣಾದಿಂದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಲಿದ್ದಾರೆ. ನಾನು ಕೂಡಾ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸುತ್ತೇನೆ. ಕೇಂದ್ರ ಸರ್ಕಾರ ಬಹಳ ಒಳ್ಳೆಯ ನಿರ್ಧಾರ ತೆಗೆದುಕೊಂಡಿದೆ. ಆರು ವರ್ಷದ ಮೇಲಿನ ಎಲ್ಲ ಮಕ್ಕಳಿಗೂ ಲಸಿಕೆ ನೀಡಲು ತೀರ್ಮಾನ ಮಾಡಲಾಗಿದೆ. ಎಲ್ಲಾ ವಯಸ್ಸಿನ ಜನರೂ ಲಸಿಕೆ ಪಡೆಯುವ ಮೂಲಕ ಕೋವಿಡ್ ತಡೆಯಬೇಕು ಎಂಬುದು ಇವತ್ತಿನ ಸಭೆ ಬಹಳ ಮುಖ್ಯವಾಗಿದೆ ಎಂದರು.