ಬೆಳ್ತಂಗಡಿ : ತೆಂಗಿನ ಮರದಿಂದ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು!

Share the Article

ಬೆಳ್ತಂಗಡಿ : ತೆಂಗಿನ ಮರದಿಂದ ವ್ಯಕ್ತಿಯೋರ್ವರು ಕಾಲು ಜಾರಿ‌ ಕೆಳಗೆ ಬಿದ್ದು, ಸಾವನ್ನಪ್ಪಿರುವ ಘಟನೆಯೊಂದು ಬೆಳ್ತಂಗಡಿ ತಾಲೂಕು ಮಿತ್ತಬಾಗಿಲು ಗ್ರಾಮದ ಬಾನೊಟ್ಟು ಎಂಬಲ್ಲಿ ನಡೆದಿದೆ.

ತೆಂಗಿನ ಕಾಯಿ ಕೀಳಲು ತೆಂಗಿನ ಮರಕ್ಕೆಂದು ಹತ್ತಿದಾಗ ಈ ದುರ್ಘಟನೆ ನಡೆದಿದೆ. ಜಿನ್ನಪ್ಪ ಗೌಡ (59) ಮೃತ ದುರ್ದೈವಿ.

ಜಿನ್ನಪ್ಪ ಗೌಡ ಅವರು ತಮ್ಮ ತೋಟದಲ್ಲಿ ತೆಂಗಿನ ಮರದಿಂದ ತೆಂಗಿನ ಕಾಯಿ ಕೀಳುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾರೆ.ಕೆಳಗೆ ಬಿದ್ದು ಗಾಯಗೊಂಡ ಅವರನ್ನು ಕೂಡಲೇ ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಆದರೆ ವೈದ್ಯರು ಪರೀಕ್ಷಿಸುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

Leave A Reply