ಉಡುಪಿ : ಪೊಲೀಸ್ ಪೇದೆ ಗುಂಡಿಕ್ಕಿಕೊಂಡು ಆತ್ಮಹತ್ಯೆ

Share the Article

ಉಡುಪಿ: ಪೊಲೀಸ್ ಪೇದೆಯೊಬ್ಬರು ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ಆದಿ ಉಡುಪಿ ಪ್ರೌಢಶಾಲೆಯಲ್ಲಿ ಕರ್ತವ್ಯ ನಿರತರಾಗಿದ್ದ ಪೇದೆಯೇ ಆತ್ಮಹತ್ಯೆಗೆ ಶರಣಾದವರು.

ಸಶಸ್ತ್ರ ಮೀಸಲು ಪಡೆಯ ಹೆಡ್ ಕಾನಸ್ಟೇಬಲ್ ರಾಜೇಶ್ ಕುಲಾಲ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ್ಮಹತ್ಯೆಗೆ ಕಾರಣವೇನೆಂದು ತಿಳಿದುಬಂದಿಲ್ಲ.

ಇವರು ಎಸೆಸೆಲ್ಸಿ ಉತ್ತರ ಪತ್ರಿಕೆ ಕೊಠಡಿಯ ಭದ್ರತಾ ನಿರ್ವಹಣೆಯಲ್ಲಿದ್ದರು. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Leave A Reply