ನಟಿ ಜಾಕ್ವೆಲಿನ್ ಫರ್ನಾಂಡೀಸ್ ಆಸ್ತಿ ಇಡಿಯಿಂದ ಜಪ್ತಿ

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರ 7.27 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡಿದೆ.

 

ಕಾನ್ಮನ್ ಸುಕೇಶ್ ಚಂದ್ರಶೇಖರ್ ಲಗತ್ತಿಸಲಾದ ಆಸ್ತಿಯು ಸ್ಥಿರ ಠೇವಣಿ ಇದಾಗಿದೆ ಎಂದು ಮೂಲಗಳು ತಿಳಿಸಿವೆ.

ಜಾಕ್ವೆಲಿನ್ ಹಾಗೂ ಅಕ್ರಮ ಹಣ ವರ್ಗಾವಣೆಯಲ್ಲಿ ಬಂಧಿತನಾಗಿರುವ ಸುಕೇಶ್ ನಡುವೆ ಅಕ್ರಮ ಹಣ ವರ್ಗಾವಣೆ ಆಗಿರುವ ಬಗ್ಗೆ ಸಾಕ್ಷ್ಯಾಧಾರಗಳನ್ನು ಜಾರಿ ನಿರ್ದೇಶನಾಲಯ ಸಾಕ್ಷಿಗಳನ್ನು ಕಲೆಹಾಕಿದ್ದು, ನಂತರ ಜಾಕ್ವೆಲಿನ್‌ ವಿರುದ್ಧ “ಲುಕ್ ಔಟ್ ಸರ್ಕ್ಯುಲರ್ ‘ ಜಾರಿ ಗೊಳಿಸಿ ವಿಚಾರಣೆಗೊಳಪಡಿಸಿತ್ತು.

52 ಲಕ್ಷ ರೂ. ಮೌಲ್ಯದ ಕುದುರೆ, 9 ಲಕ್ಷ ರೂ. ಮೌಲ್ಯದ ಪರ್ಷಿಯಾ ದೇಶದ ಬೆಕ್ಕು ಸೇರಿದಂತೆ ಜಾಕ್ವೆಲಿನ್ ಗೆ ಸುಕೇಶ್ ಒಟ್ಟು 10 ಕೋಟಿ ಮೌಲ್ಯದ ಉಡುಗೊರೆಗಳನ್ನು ನೀಡಿದ್ದ ವಿಷಯ ತನಿಖೆಯಿಂದ ಬಯಲಿಗೆ ಬಂದಿತ್ತು.

Leave A Reply

Your email address will not be published.