ಕಾರಿನ ಟೈರ್ ಸ್ಫೋಟಗೊಂಡು ಭೀಕರ ಅಪಘಾತ !! | ಸ್ಥಳದಲ್ಲೇ ನಾಲ್ವರು ದುರ್ಮರಣ

Share the Article

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಈ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಗರದ ಹೊರ ವಲಯದಲ್ಲಿ ಶುಕ್ರವಾರ ನಡೆದಿದೆ.

ಒಂದು ಕಾರಿನ ಟೈರ್ ಬ್ಲಾಸ್ಟ್ ಆದ ಪರಿಣಾಮ ಎದುರಿಗೆ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಗುಜರಾತ್ ಹಾಗೂ ಕೇರಳ ರಾಜ್ಯಕ್ಕೆ ಸೇರಿದ ಒಟ್ಟು ನಾಲ್ವರು ಸ್ಥಳದಲ್ಲಿಯೇ ದುರ್ಮರಣಕ್ಕೀಡಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ಗುಜರಾತ್‌ನ ದೀನೇಶ ಬಾಯ್(35), ಲತೀಶ ಬಾಯ್(36), ಸುರೇಶ ಬಾಯ್(38) ಹಾಗೂ ಕೇರಳದ ಸಹಾಲ್(22) ಎಂದು ಗುರುತಿಸಲಾಗಿದೆ. ಕೇರಳದ ದಾನೇಶ(28), ಜೈನಾಬಿ(25) ಗುಜರಾತನ ಅಶ್ವಿನ್(25) ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ನಗರದ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಾವಣಗೆರೆಯಿಂದ ಹುಬ್ಬಳ್ಳಿ ಕಡೆಗೆ ಅತ್ಯಂತ ವೇಗವಾಗಿ ಹೊರಟಿದ್ದ ಗುಜರಾತ್​ ಮೂಲದ ಕಾರಿನ ಟೈರ್ ಬ್ಲಾಸ್ಟ್ ಆಗಿದೆ. ಪರಿಣಾಮ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದು ಎದುರಿಗೆ ಬರುತ್ತಿದ್ದ ಮತ್ತೊಂದು ಕಾರಿನ ಮೇಲೆ ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ವಿವರಿಸಿದ್ದಾರೆ.

Leave A Reply