ಗ್ರಾ.ಪಂ. 201 ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಗ್ರಾಮ ಪಂಚಾಯತ್ ಗಳಲ್ಲಿ ತೆರವಾಗಿರುವ 201 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ರಾಜ್ಯ ಚುನಾವಣಾ ಆಯೋಗದಿಂದ ಚುನಾವಣೆ ಘೋಷಣೆಯಾಗಿದ್ದು,ಮೇ 20 ರಂದು ಮತದಾನ ನಡೆಯಲಿದೆ.

 

ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ 3 ಮತ್ತು ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತ್ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಮಂಗಳೂರು ತಾಲೂಕಿನ ಮುಚೂರು ಗ್ರಾಮ ಪಂಚಾಯತ್, ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮ ಪಂಚಾಯತ್, ಪುತ್ತೂರು ತಾಲೂಕಿನ ಬಾಡು ಗ್ರಾಮ ಪಂಚಾಯತ್ ಮತ್ತು ಉಡುಪಿ ತಾಲೂಕಿನ ಅಲೆವೂರು ಗ್ರಾಮ ಪಂಚಾಯತ್ ಗಳ ತಲಾ ಒಂದು ಸ್ಥಾನಗಳಿಗೆ ಉಪ ಚುನಾವಣೆ ನಿಗದಿಯಾಗಿದೆ. ಮೇ.5ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದ್ದು, ಮೇ.10 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ, ಮೇ 22ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

Leave A Reply

Your email address will not be published.