ಇಂದಿನಿದ ಭಾರತಕ್ಕೆ ನೂತನ ಸೇನಾ ಮುಖ್ಯಸ್ಥ

ಸೇನಾ ಉಪ ಮುಖ್ಯಸ್ಥರಾಗಿದ್ದ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರು ನೂತನ ಸೇನಾ ಮುಖ್ಯಸ್ಥರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರಿಂದ ತೆರವಾದ ಸ್ಥಾನಕ್ಕೆ ರಾಜು ಅವರನ್ನು ನೇಮಕ ಮಾಡಲಾಗಿದೆ. ಮೇ 1 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ರಕ್ಷಣಾ ಸಚಿವಾಲಯ ಶುಕ್ರವಾರ ತಿಳಿಸಿದೆ.

ಭಾರತದ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರಾಗಿದ್ದ ಬಿಪಿನ್ ರಾವತ್ ಅವರ ಸಾವಿನ ಬಳಿಕ 2021ರ ಡಿಸೆಂಬರ್ ತಿಂಗಳಲ್ಲಿ ಭಾರತದ ಸೇನಾ ಮುಖ್ಯಸ್ಥರಾಗಿ ಎಂ.ಎಂ. ನರವಣೆ ಅಧಿಕಾರ ವಹಿಸಿಕೊಂಡಿದ್ದರು. ಅವರು ನಿವೃತ್ತರಾಗಿರುವ ಹಿನ್ನೆಲೆಯಲ್ಲಿ ಹೊಸ ಉತ್ತರಾಧಿಕಾರಿಯಾಗಿ ಜನರಲ್ ಮನೋಜ್ ಪಾಂಡೆ ಅವರನ್ನು ಘೋಷಿಸಲಾಗಿದೆ.

ಲೆಫ್ಟಿನೆಂಟ್ ಜನರಲ್ ರಾಜು ಹೆಲಿಕಾಪ್ಟರ್ ಪೈಲಟ್ ಆಗಿದ್ದು, ಪ್ರಸ್ತುತ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಪೂರ್ವ ಲಡಾಖ್‌ನಲ್ಲಿ ಸೇನೆಯ ಒಟ್ಟಾರೆ ಕಾರ್ಯಾಚರಣೆಯ ಸಿದ್ಧತೆಯನ್ನು ನೋಡಿಕೊಳ್ಳುತ್ತಾರೆ.

ರಾಜು ಸೈನಿಕ್ ಸ್ಕೂಲ್ ಬಿಜಾಪುರ ಮತ್ತು ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ ಹಳೆಯ ವಿದ್ಯಾರ್ಥಿ, ಅವರನ್ನು ಡಿಸೆಂಬರ್ 15, 1984 ರಂದು ಜಾಟ್ ರೆಜಿಮೆಂಟ್‌ಗೆ ಸೇರ್ಪಡೆಯಾಗಿದ್ದರು. ಚೀನಾ, ಪಾಕಿಸ್ತಾನ ಸೇರಿದಂತೆ ಭಾರತವು ತನ್ನ ಗಡಿಗಳಲ್ಲಿ ಅನೇಕ ಸವಾಲುಗಳನ್ನು ಎದುರಿಸುತ್ತಿರುವ ಸಮಯದಲ್ಲಿ ಮನೋಜ್ ಪಾಂಡೆ ವಿಶ್ವದ ಅತಿದೊಡ್ಡ ಸೇನೆಯೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಭಾರತದ ಸೇನೆಯ ಆಳ್ವಿಕೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಸೇನಾ ಪಡೆ, ವಾಯುಪಡೆ ಮತ್ತು ನೌಕಾಪಡೆಯ ಹೊಣೆ ಹೊರಲಿದ್ದಾರೆ.

Leave A Reply

Your email address will not be published.