SBI ನಲ್ಲಿ ಉದ್ಯೋಗವಕಾಶ : ಮಾಸಿಕ ವೇತನ ರೂ. 36,000-ರೂ.90,000 ದವರೆಗೆ| ಆಸಕ್ತರು ಅರ್ಜಿ ಸಲ್ಲಿಸಿ!
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.
35 ಸಿಸ್ಟಂ ಅಧಿಕಾರಿ, ಎಕ್ಸಿಕ್ಯುಟಿವ್, ಸೀನಿಯರ್ ಎಕ್ಸಿಕ್ಯುಟಿವ್ ಮತ್ತು ಸೀನಿಯರ್ ಸ್ಪೆಷಲ್ ಎಕ್ಸಿಕ್ಯುಟಿವ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತರು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ಏಪ್ರಿಲ್ 27 , 2022
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 17,2022.
ವಿದ್ಯಾರ್ಹತೆ : ಈ ಹುದ್ದೆಗಳಿಗೆ ಬಿ.ಇ/ಬಿ.ಟೆಕ್, ಎಂಸಿಎ, ಎಂ.ಎಸ್ಸಿ ಮತ್ತು ಎಂ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 36,000/- ರಿಂದ 89,890/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ : ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ