ಬಜರಂಗದಳ ಕಾರ್ಯಕರ್ತರು ರಣಹದ್ದುಗಳ ರೀತಿ ವರ್ತಿಸಿ, ಅಮಾಯಕ ಜನರ ಮೇಲೆ ದಾಳಿ ಮಾಡುತ್ತಿದ್ದಾರೆ: ಸಿದ್ದರಾಮಯ್ಯ
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದಲ್ಲಿ ಕರು ತೆಗೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ಬಜರಂಗದಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು ಬಜರಂಗ ದಳದ ಕಾರ್ಯಕರ್ತರು ಮಹಿಳೆ ಮೇಲೆ ಹಲ್ಲೆ ಮಾಡಿ, ಕಿರುಕುಳ ನೀಡಿರುವ ವರದಿಗಳನ್ನು ಕೇಳಿ ಅತೀವ ಬೇಸರವಾಗಿದೆ. ಬಜರಂಗದಳದ ಕಾರ್ಯಕರ್ತರು ರಣಹದ್ದುಗಳ ರೀತಿ ವರ್ತಿಸುತ್ತಿದ್ದಾರೆ. ಸುದ್ದಿಗೆ ಬರಲು ಅಮಾಯಕ ಜನರ ಮೇಲೆ ದಾಳಿ ಮಾಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.
“ಹಲ್ಲೆಕೋರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲು ಪೊಲೀಸರು ಮಿನಾಮೇಷ ಎಣಿಸುತ್ತಿದ್ದಾರೆ ಎಂಬ ವರದಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಕರ್ನಾಟಕ ಪೊಲಿಸರು ಸಾಮಾನ್ಯ ಜನರ ಪರ ಕೆಲಸ ಮಾಡುತ್ತಿದ್ದಾರಾ? ಅಥವಾ ಬಿಜೆಪಿ ಮತ್ತು ಅವರ ಗೂಂಡಾಗಳಿಗಾಗಿ ಕೆಲಸ ಮಾಡುತ್ತಿದ್ದಾರಾ?’ ಎಂದು ಪ್ರಶ್ನೆ ಮಾಡಿದ್ದರೆ.