ವಿಧ್ಯಾರ್ಥಿಗಳ ಗಮನಕ್ಕೆ; ನಾಳೆನಡೆಯಬೇಕಿದ್ದ ವಿವಿ ಪರೀಕ್ಷೆ ಮುಂದೂಡಿಕೆ
ರಾಜ್ಯ ಸರ್ಕಾರ ರಂಜಾನ್ ಹಬ್ಬದ ಪ್ರಯುಕ್ತ ಸಾರ್ವತ್ರಿಕ ರಜೆಯನ್ನು ನಾಳೆ ಘೋಷಿಸಿದೆ. ಈ ಹಿನ್ನಲೆಯಲ್ಲಿ ನಾಳೆ ನಡೆಯಬೇಕಿದ್ದಂತ ಮೈಸೂರು ವಿಶ್ವವಿದ್ಯಾಲಯ ಮತ್ತು ಕುವೆಂಪು ವಿಶ್ವವಿದ್ಯಾಲಯದ ಸ್ನಾತಕ ಪದವಿ ಹಾಗು ಕಾನೂನು ಪದವಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮೈಸೂರು ವಿಶ್ವವಿದ್ಯಾಲಯ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 02-05-2022ರಂದು ರಂಜಾನ್ ಹಬ್ಬದ ಪ್ರಯುಕ್ತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹೀಗಾಗಿ ಈ ದಿನದಂದು ನಡೆಯಬೇಕಿದ್ದ ಮೈಸೂರು ವಿಶ್ವವಿದ್ಯಾಲಯ ಸ್ನಾತಕ ಪದವಿ, ಎನ್‌ಇಪಿ ಮೊದಲ ಸೆಮಿಸ್ಟ್ ಮತ್ತು ಇನ್ನಿತರ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿದೆ. ನಾಳೆ ನಿಗದಿಯಾಗಿದ್ದಂತ ಪರೀಕ್ಷೆಗಳನ್ನು ದಿನಾಂಕ 07-05-2022ರಂದು ನಡೆಸಲಾಗುವುದು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದೆ.
ಅದೇ ರೀತಿ ಕುವೆಂಪು ವಿಶ್ವವಿದ್ಯಾಲಯದ ಎಲ್ಲ ಸ್ನಾತಕ ಪದವಿ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ. ರಾಜ್ಯ ಸರ್ಕಾರ ಮೇ 2 ರಂದು ರಂಜಾನ್ ರಜೆ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಸೋಮವಾರ ನಿಗದಿಯಾಗಿದ್ದ ಕುವೆಂಪು ವಿವಿಯ ಎಲ್ಲ ಸ್ನಾತಕ ಪದವಿ ಪರೀಕ್ಷೆ ಮುಂದೂಡಲಾಗಿದೆ. ನಾಳೆ ನಡೆಯಬೇಕಿದ್ದ ಪರೀಕ್ಷೆಯ ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್.ಕೆ. ನವೀನ್ ಕುಮಾರ್ ತಿಳಿಸಿದ್ದಾರೆ.