ಎಸ್ ಎಸ್ ಎಲ್ ಸಿ ಪಾಸಾದವರಿಗೆ ಭರ್ಜರಿ ಉದ್ಯೋಗವಕಾಶ| ಕರ್ನಾಟಕ ಅಂಚೆ ಇಲಾಖೆಯಲ್ಲಿದೆ ಬರೋಬ್ಬರಿ 2410 ಹುದ್ದೆಗಳು !

ಭಾರತೀಯ ಅಂಚೆ ಇಲಾಖೆಯಿಂದ ಕರ್ನಾಟಕ ಅಂಚೆ ವೃತ್ತದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು.

 

ಹುದ್ದೆ : ಬ್ರಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್, ಗ್ರಾಮೀಣ ಡಾಕ್ ಸೇವಕ

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮೇ 02, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 05,
2022

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಭಾರತೀಯ ಅಂಚೆ ಇಲಾಖೆಯಿಂದ ಒಟ್ಟು 38,926 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅದರಲ್ಲಿ ಕರ್ನಾಟಕ ಅಂಚೆ ವೃತ್ತದಲ್ಲಿ 2,410 ಹುದ್ದೆಗಳು ಖಾಲಿ ಇದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ಜೊತೆಗೆ ಅಭ್ಯರ್ಥಿಯು ಸ್ಥಳೀಯ ಭಾಷೆಯ ಪ್ರಾವೀಣ್ಯತೆ ಹೊಂದಿರಬೇಕು.

ವಯೋಮಾನ : ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ: ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ, ಪ.ಜಾ, ಪ.ಪಂಗಡದ ಅಭ್ಯರ್ಥಿಗಳಿಗೆ 05 ವರ್ಷ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ವೇತನ : ಬ್ರಾಂಚ್ ಪೋಸ್ಟ್ ಮಾಸ್ಟರ್- ರೂ.12,000
ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ – ರೂ.10,000
ಗ್ರಾಮೀಣ ಡಾಕ್ ಸೇವಕ – ರೂ. 10,000

ಆಯ್ಕೆ ವಿಧಾನ : 10ನೇ ತರಗತಿ/ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಕರ್ನಾಟಕ ಅಂಚೆ ವೃತ್ತದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ:

ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.

ಅಭ್ಯರ್ಥಿಗಳು ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ (ಉದಾಹರಣೆಗೆ: ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ದೂರವಾಣಿ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ: ಪ.ಜಾತಿ, ಪ.ಪಂ., ಪಿಡಬ್ಲ್ಯೂಡಿ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಉಳಿದ ಅಭ್ಯರ್ಥಿಗಳು ರೂ. 100 ಅರ್ಜಿ ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ಕ್ಲಿಕ್ ಮಾಡಿ

Leave A Reply

Your email address will not be published.