ಕರ್ನಾಟಕಕ್ಕೆ ಕೇಂದ್ರ ಸಚಿವ ಅಮಿತ್ ಶಾ ಆಗಮನ; ಇದಕ್ಕೆ ಬಿ.ಎಸ್. ಯಡಿಯೂರಪ್ಪ ಹೇಳಿಕೆ ಏನು ?

Share the Article

ಇಂದು ರಾತ್ರಿ ಕೇಂದ್ರ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸಲಿದ್ದಾರೆ. ರೇಸ್ ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ಶಾ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಲಿದ್ದಾರೆ. 

ನಾಳೆ ಮಧ್ಯಾಹ್ನ ಸಿಎಂ ಅಧಿಕೃತ ನಿವಾಸದಲ್ಲಿ ಭೋಜನ ನಂತರ ರಾಜ್ಯ ಬಿಜೆಪಿ ಕೋರ್ಕಮಿಟಿ ಸದಸ್ಯರ ಜೊತೆ ಅಮಿತ್ ಶಾ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ ಸಿದ್ಧತೆಯ ಭಾಗವಾಗಿ ಚರ್ಚಿಸಲಿದ್ದಾರೆ.

ರಾಜ್ಯ ರಾಜಕೀಯದ ಸ್ಥಿತಿ ತಿಳಿಯಲು ಅಮಿತ್ ಶಾ ಬರುತ್ತಿದ್ದಾರೆ. ಚುನಾವಣಾ ವರ್ಷ ಹಿನ್ನೆಲೆಯಲ್ಲಿ ರಾಜ್ಯದ ಬಗ್ಗೆ ನರೇಂದ್ರ ಮೋದಿ, ಅಮಿತ್ ಶಾ ಹೆಚ್ಚು ಗಮನ ನೀಡಲಿದ್ದಾರೆ. ಮುಂದಿನ ಎಲೆಕ್ಷನ್ನಲ್ಲಿ 150 ಸ್ಥಾನ ಗೆಲ್ಲಲು ಗುರಿ ಇಟ್ಟಿದ್ದೇವೆ. ರಾಜ್ಯ ನಾಯಕರ ಜೊತೆ ಶಾ ಸಮಾಲೋಚನೆ ನಡೆಸಲಿದ್ದಾರೆ ಎಂದು ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ದೆಹಲಿಯಿಂದ ಇಂದು ಸಂಜೆ ಬೆಂಗಳೂರಿಗೆ ಕರ್ನಾಟಕ ರಾಜ್ಯ ಬಿಜೆಪಿ ಘಟಕದ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಲಿದ್ದಾರೆ. ಹಾಗೂ ರೇಸ್ಕೋರ್ಸ್ ರಸ್ತೆ ಹೋಟೆಲ್ನಲ್ಲಿ ನಡೆಯುವ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

Leave A Reply

Your email address will not be published.