ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ | ಬಿಜೆಪಿ ವರಿಷ್ಠರು ಬೆಂಗಳೂರಿಗೆ

ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ ಒಂದು ವರ್ಷ ಬಾಕಿ ಉಳಿದಿರುವಂತೆಯೇ ಪಕ್ಷದ ಕರ್ನಾಟಕ ಘಟಕದಲ್ಲಿ ಪ್ರಮುಖ ಬದಲಾವಣೆಯಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸೂಚಿನೆ ನೀಡಿದ್ದು,ಈ ನಡುವೆ ಬಿಜೆಪಿ ವರಿಷ್ಠರಾದ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದಾರೆ.

ಕೆಲವು ಭಾಗಗಳಲ್ಲಿ ಮೂಲೆಗುಂಪಾಗಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸೂಚನೆಗಳೂ ಇವೆ. ದೆಹಲಿಯ ಕಾರ್ಪೊರೇಷನ್ ಚುನಾವಣೆಯ ಸಮಯದಲ್ಲಿ, ನಾವು ಯಾವುದೇ ಹಾಲಿ ಕಾರ್ಪೊರೇಟರ್‌ಗಳಿಗೆ ಟಿಕೆಟ್ ನೀಡದಿರಲು ನಿರ್ಧರಿಸಿದ್ದೇವೆ. ಗುಜರಾತ್ ನಾಗರಿಕ ಚುನಾವಣೆಯಲ್ಲಿ, ಎರಡು ಬಾರಿ ಕಾರ್ಪೊರೇಟರ್‌ಗಳಿಗೆ ಸಾಮೂಹಿಕ ನಿವೃತ್ತಿ ‘(ಸಾಮೂಹಿಕ ನಿವೃತ್ತಿ) ನೀಡಲಾಯಿತು. ಅವರ ಗೆಳೆಯರ ಬಳಗಕ್ಕೂ ಟಿಕೆಟ್ ನೀಡದಿರಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಸಂಘಟನೆಯ ಉಸ್ತುವಾರಿ ಸಂತೋಷ್ ಹೇಳಿದ್ದಾರೆ.

ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ವಿಜಯ್ ರೂಪಾನಿ ಅವರನ್ನು ಬದಲು ಮಾಡಿ ಭೂಪೇಂದ್ರ ಪಟೇಲ್ ಅವರಿಗೆ ಅಧಿಕಾರ ಕೊಟ್ಟಾಗ, ಹೊಸತನವನ್ನು ತರಲು ಇಡೀ ಸಚಿವ ಸಂಪುಟವನ್ನು ಬದಲಾಯಿಸಲಾಯಿತು’ ಎಂದರು.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನಕಾರ್ಯದರ್ಶಿ ಬಿ.ಎಲ್ ಸಂತೋಷ್ ನೇತೃತ್ವದಲ್ಲಿ ಮಹತ್ವದ ಬಿಜೆಪಿ ಸಭೆ ನಡೆಸಲಾಗಿದ್ದು,ಸಭೆಯಲ್ಲಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಿಎಂ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಸಚಿವ ಗೋವಿಂದ್ ಕಾರಜೋಳ, ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್, ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಭಾಗಿಯಾಗಿದ್ದರು.

ಸಭೆ ಬಳಿಕ ಮಾತನಾಡಿದ ಸಿ.ಟಿ ರವಿ, ಅಮಿತ್ ಶಾ ಕಾರ್ಯಕ್ರಮ, ನಮ್ಮ ಮುಂದಿನ ಯೋಜನೆ ಬಗ್ಗೆ ಚರ್ಚೆ ಮಾಡಿದ್ದೇವೆ.ಮಾದ್ಯಮಕ್ಕೆ ಹೇಳದಿರುವ ವಿಚಾರವೂ ಬಹಳ‌ ಚರ್ಚೆಯಾಗಿದೆ.ತುಂಬಾ ಜನ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಮುಂದೆ ಚುನಾವಣೆ ಬರಲಿದೆ ಅದರ ಬಗ್ಗೆ ಚರ್ಚೆಯಾಗಿದೆ. ಹಳೆ ಮೈಸೂರು, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ, ಕರಾವಳಿ ಭಾಗದಿಂದಲೂ ಸೇರ್ಪಡೆಯಾಗಲಿದ್ದಾರೆ ಎಂದರು.

ಮೈಸೂರಿನಲ್ಲಿ ಸಂತೋಷ್ ಅವರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಂತೋಷ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಅವರ ಹೇಳಿಕೆ ರಾಷ್ಟ್ರಕ್ಕೆ ಸೇರಲಿದೆ. ನಮ್ಮ ಪಕ್ಷ ಏನು ಮಾಡಲಿದೆ,‌ ಪ್ರಯೋಗ ಶೀಲತೆ ಬಗ್ಗೆ ಹೇಳಿದ್ದಾರೆ. ಭಾರತದಲ್ಲೇ ಕರ್ನಾಟಕ ಇದೆ, ಎಲ್ಲವೂ ಅದರಲ್ಲಿ ಸೇರಲಿದೆ. ಸಂತೋಷ್ ಅವರ ಹೇಳಿಕೆ ಬಗ್ಗೆ ಯಾವುದೇ ಅರ್ಥ ಕಲ್ಪಿಸೋದು ಬೇಡ. ವ್ಯಕ್ತಿಗತವಾಗಿ ತೆಗೆದುಕೊಳ್ಳೋದು ಬೇಡ. ಯೋಗಿ ಅಂತವರು ಬೆಳಕಿಗೆ ಬಂದಿದ್ದು, ಇಂತ ಪ್ರಯೋಗಶೀಲತೆಯಿಂದಲೇ. ಪಕ್ಷದ ಸಿದ್ಧಾಂತ ಕಾರ್ಯಕರ್ತನಾಗಿ ಯಾವ ಎತ್ತರಕ್ಕೆ ಬೇಕಾದರೂ ಹೋಗಬಹುದು. ಕುಟುಂಬದಿಂದ ಅಲ್ಲ ಅಂತ ಬಾಹ್ಯವಾಗಿ ಹೇಳಿದರು.

ಉತ್ತರಾಖಂಡದಲ್ಲಿ ಸೋತವರನ್ನೂ ಸಿಎಂ ಮಾಡಲಾಗಿದೆ. ಪಕ್ಷ ತೀರ್ಮಾನ ಮಾಡಿದರೆ ಯಾರನ್ನ, ಯಾವ ಸ್ಥಾನಕ್ಕೆ ಬೇಕಾದ್ರೂ ಕೂರಿಸಲಿದೆ ಅಂತ ಬಾಹ್ಯ ಹೇಳಿಕೆ ನೀಡಿದರು. ಯಾವುದು ಆ ಕಾಲಕ್ಕೆ ಸೂಕ್ತ ಅನ್ನಲಿದೆ ಅದನ್ನ ಅಳವಡಿಸಿಕೊಳ್ಳಲಾಗಿದೆ. ಎಷ್ಟೇ ವೈಜ್ಞಾನಿಕವಾಗಿ ಹೇಳಿದರೂ , ಕಾಲ ಕಾಲಕ್ಕೆ ಎಲ್ಲವೂ ಬದಲಾಗಲಿದೆ ಎಂದಿದ್ದಾರೆ.

ಅಮಿತ್‌ ಶಾ ಪಕ್ಷದ ಕಚೇರಿಗೆ ಭೇಟಿ ನೀಡಿ, ರಾಜ್ಯದಲ್ಲಿ ಪಕ್ಷ ಸಂಘಟನೆ ಮತ್ತು ಚುನಾವಣೆ ದೃಷ್ಟಿಯಿಂದ ಮುಂದಿನ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ. ಈಗಾಗಲೇ ರಾಜ್ಯ ನಾಯಕರಿಗೆ ಚುನಾವಣೆಯಲ್ಲಿ 150ರ ಗುರಿ ಮುಟ್ಟಲು ನೀಲನಕ್ಷೆ ಸಿದ್ಧಪಡಿಸುವಂತೆ ಅವರು ಸೂಚನೆ ನೀಡಿದ್ದಾರೆ. ಅವರ ಬರುವಿಕೆಯ ಹಿನ್ನೆಲೆಯಲ್ಲಿ ರವಿವಾರ ಸಿಎಂ ಬೊಮ್ಮಾಯಿ, ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲು, ರಾ. ಸಂಘಟನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಸಭೆ ನಡೆಸಿದ್ದಾರೆ.

ಅಮಿತ್‌ ಶಾ ಅವರ ರಾಜ್ಯ ಭೇಟಿ ಸಂದರ್ಭದಲ್ಲಿ ಬೇರೆ ಪಕ್ಷಗಳ ಅನೇಕ ಮುಖಂಡರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುವ ಸಾಧ್ಯತೆ ಇದೆ.

ಮಾಜಿ ಸಚಿವ ವರ್ತೂರು ಪ್ರಕಾಶ್‌ ಬಿಜೆಪಿ ಸೇರಲು ಪ್ರಯತ್ನ ನಡೆಸಿದ್ದು, ರವಿವಾರ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಅವರ ಸೇರ್ಪಡೆ ಕುರಿತು ರವಿವಾರ ಸಂಜೆ ನಡೆದ ಪಕ್ಷದ ನಾಯಕರ ಸಭೆಯಲ್ಲಿ ಚರ್ಚೆಯಾಗಿದ್ದು, ಬಹುತೇಕ ಅವರ ಸೇರ್ಪಡೆಗೆ ಒಪ್ಪಿಗೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಗುಜರಾತ್‌, ಉತ್ತರಾಖಂಡ ಮತ್ತಿತರ ಅನೇಕ ರಾಜ್ಯಗಳಲ್ಲಿ ನಾಯಕತ್ವ ಬದಲಾವಣೆ ವಿಚಾರದಲ್ಲಿ ತೆಗೆದುಕೊಂಡ ನಿಲುವಿನಿಂದ ಪಕ್ಷಕ್ಕೆ ಹೆಚ್ಚು ಅನುಕೂಲವಾಗಿದೆ. ನಾಯಕತ್ವ ಬದಲಾವಣೆಗೆ ಯಾವುದೇ ಆರೋಪ ಇರಬೇಕೆಂದೇನೂ ಇಲ್ಲ ಎಂದು ಬಿಜೆಪಿ ರಾ. ಸಂಘಟನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರು ಮೈಸೂರಿನಲ್ಲಿ ನೀಡಿರುವ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇದು ಮತ್ತು ಕುಟುಂಬ ರಾಜಕಾರಣಕ್ಕೆ ಪಕ್ಷ ಮಣೆ ಹಾಕುವುದಿಲ್ಲ ಎಂಬ ಹೇಳಿಕೆ ಬಿಜೆಪಿಯಲ್ಲಷ್ಟೇ ಅಲ್ಲದೇ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

Leave A Reply

Your email address will not be published.