ಹಳೇ ಹುಬ್ಬಳ್ಳಿ ಕೋಮುಗಲಭೆ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಂಐ ಎಂ ಕಾರ್ಪೋರೇಟರ್ ಸೇರಿದಂತೆ
154 ಆರೋಪಿತರಿಗೆ ಮೇ 13ರವರೆಗೆ ನ್ಯಾಯಾಂಗ ಬಂಧನ ವಿಧಿಸಿ 4 ನೇ ಜೆ ಎಂ ಎಫ್ ಸಿ ನ್ಯಾಯಾಲಯ ಆದೇಶ ನೀಡಿದೆ.

ಮೊದಲು ಏ.30 ರವರೆಗೆ ನ್ಯಾಯಾಂಗ ಬಂಧನವಾಗುತ್ತು. ಅವಧಿ ಮುಗಿದ ನಂತರ ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಮೇ.13 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ‌.

ಆರೋಪಿಗಳಿಗೆ ಜಾಮೀನು ದೊರೆತರೆ ಸಾಕ್ಷಿ ನಾಶಪಡಿಸುವ ಹಾಗೂ ಸಮಾಜದಲ್ಲಿ ಶಾಂತಿ ಕದಡುವ ಸಾಧ್ಯತೆಯಿದೆ ಎಂದು ಪೊಲೀಸರು ಆಕ್ಷೇಪಣೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.

ಶನಿವಾರ ಒಂದನೇ ಸೇಷನ್ ಕೋರ್ಟ್‌ನಲ್ಲಿ ವಿಡಿಯೊ ಕಾನ್ಫರೆನ್ಸ್‌ ಮೂಲಕ ಆರೋಪಿಗಳನ್ನು ನ್ಯಾಯಾಧೀಶರ ಎದುರು ಹಾಜರು ಪಡಿಸಲಾಯಿತು. 20 ಆರೋಪಿಗಳ ಪರ ಜಾಮೀನು ಅರ್ಜಿಗಳು ಸಲ್ಲಿಕೆಯಾಗಿವೆ. ಪರೀಕ್ಷೆ ಕಾರಣಕ್ಕೆ ಒಬ್ಬ ಆರೋಪಿ ಪರ ಹಾಗೂ ಅನಾರೋಗ್ಯದ ಹಿನ್ನೆಲೆಯಲ್ಲಿ ಇನ್ನುಳಿದ ಆರೋಪಿ ಪರ ಜಾಮೀನು ಅರ್ಜಿಗಳು ಸಲ್ಲಿಕೆಯಾಗಿವೆ.

ಕಲಬುರ್ಗಿ ಸೆಂಟ್ರಲ್ ಜೈಲಿನಲ್ಲಿ 103 ಜನ, ಬಳ್ಳಾರಿ ಜೈಲಿನಲ್ಲಿ 17 ಹಾಗೂ ಮೈಸೂರು ಜೈಲಿನಲ್ಲಿ 10 ಜನ, ಉಳಿದವರನ್ನು ಹುಬ್ಬಳ್ಳಿ ಹಾಗೂ ಧಾರವಾಡ ಸಬ್ ಜೈಲಿನಲ್ಲಿ ಇರಿಸಲಾಗಿದೆ.

Leave A Reply

Your email address will not be published.