ವಾತಾರವರಣದಲ್ಲಿ ಬಿಸಿಲಿನ ತಾಪ ಹೆಚ್ಚಿರುವುದರಿಂದ ಈಗಾಗಲೇ ಶಾಲಾ ಕಾಲೇಜುಗಳ ಆರಂಭಕ್ಕೆ ಮೇ 14ರಂದು ದಿನ ನಿಗದಿ ಮಾಡಲಾಗಿರುವುದನ್ನು ವಿಸ್ತರಿಸಬೇಕೆಂದು ವಿಧಾನಪರಿಷತ್ ಸದಸ್ಯ ಎಸ್.ಎಲ್ ಭೋಜೇಗೌಡ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಸಲ್ಲಿಸಿದ ಮನವಿಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಲಾಗಿದ್ದು, ಪ್ರಸ್ತುತ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಸಹಿತ ದಾವಣಗೆರೆ ಜಿಲ್ಲೆಯ ವಾತಾರವರಣದಲ್ಲಿ ಹಿಂದೆಂದಿಗಿಂತಲೂ ಈ ಬಾರಿ ಹೆಚ್ಚಿರುವ ಬಿಸಿಲ ಧಗೆಯಿಂದ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಆತಂಕ ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮೇ 14 ರಿಂದ ಶಾಲೆಗಳನ್ನು ತೆರೆಯಲು ಹೊರಡಿಸಿರುವ ಆದೇಶವನ್ನು ಮರುಪರಿಶೀಲಿಸಿ, ಮೇ ಅಂತ್ಯದವರೆಗೆ ರಜೆ ಮುಂದುವರಿಸಲು ಮನವಿ ಸಲ್ಲಿಸಲಾಗಿದೆ. ಸದ್ಯ ಈ ವಿಚಾರ ಮಾನ್ಯ ಮುಖ್ಯಮಂತ್ರಿ ಬೊಮ್ಮಾಯಿ ಗಮನಕ್ಕೂ ಬಂದಿದ್ದು,ರಜೆ ವಿಸ್ತರಣೆಯ ಬಗ್ಗೆ ಸರ್ಕಾರ ಯಾವ ಕ್ರಮ ಕೈಗೊಳ್ಳುತ್ತದೆ ಎನ್ನುವುದನ್ನು ಕಾದುನೋಡಬೇಕಾಗಿದೆ.