ಮೇ ಅಂತ್ಯದವರೆಗೆ ವಿಸ್ತರಣೆಯಾಗಲಿದೆಯೇ ಶಾಲಾ ಮಕ್ಕಳ ಬೇಸಿಗೆ ರಜಾ!!? ಹೆಚ್ಚಿದ ತಾಪಮಾನದಿಂದ ಶಾಲಾ ಪ್ರಾರಂಭ ದಿನ ವಿಸ್ತರಿಸಲು ಮನವಿ

ವಾತಾರವರಣದಲ್ಲಿ ಬಿಸಿಲಿನ ತಾಪ ಹೆಚ್ಚಿರುವುದರಿಂದ ಈಗಾಗಲೇ ಶಾಲಾ ಕಾಲೇಜುಗಳ ಆರಂಭಕ್ಕೆ ಮೇ 14ರಂದು ದಿನ ನಿಗದಿ ಮಾಡಲಾಗಿರುವುದನ್ನು ವಿಸ್ತರಿಸಬೇಕೆಂದು ವಿಧಾನಪರಿಷತ್ ಸದಸ್ಯ ಎಸ್.ಎಲ್ ಭೋಜೇಗೌಡ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಸಲ್ಲಿಸಿದ ಮನವಿಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಲಾಗಿದ್ದು, ಪ್ರಸ್ತುತ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಸಹಿತ ದಾವಣಗೆರೆ ಜಿಲ್ಲೆಯ ವಾತಾರವರಣದಲ್ಲಿ ಹಿಂದೆಂದಿಗಿಂತಲೂ ಈ ಬಾರಿ ಹೆಚ್ಚಿರುವ ಬಿಸಿಲ ಧಗೆಯಿಂದ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮೇ 14 ರಿಂದ ಶಾಲೆಗಳನ್ನು ತೆರೆಯಲು ಹೊರಡಿಸಿರುವ ಆದೇಶವನ್ನು ಮರುಪರಿಶೀಲಿಸಿ, ಮೇ ಅಂತ್ಯದವರೆಗೆ ರಜೆ ಮುಂದುವರಿಸಲು ಮನವಿ ಸಲ್ಲಿಸಲಾಗಿದೆ. ಸದ್ಯ ಈ ವಿಚಾರ ಮಾನ್ಯ ಮುಖ್ಯಮಂತ್ರಿ ಬೊಮ್ಮಾಯಿ ಗಮನಕ್ಕೂ ಬಂದಿದ್ದು,ರಜೆ ವಿಸ್ತರಣೆಯ ಬಗ್ಗೆ ಸರ್ಕಾರ ಯಾವ ಕ್ರಮ ಕೈಗೊಳ್ಳುತ್ತದೆ ಎನ್ನುವುದನ್ನು ಕಾದುನೋಡಬೇಕಾಗಿದೆ.

Leave A Reply

Your email address will not be published.