ಬ್ಯಾಂಕ್ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ !! | ಡಿಸಿಸಿ ಬ್ಯಾಂಕ್ ನ 48 ಹುದ್ದೆಗಳಿಗೆ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬ್ಯಾಂಕ್ ನಲ್ಲಿ ಉದ್ಯೋಗ ಹೊಂದಬೇಕೆಂದು ಬಯಸುತ್ತಿರುವ ವರೆಗೆ ಉತ್ತಮ ಅವಕಾಶವೊಂದಿದೆ. ಡಿಸಿಸಿ ಬ್ಯಾಂಕ್ ದಾವಣಗೆರೆಯಲ್ಲಿ ಒಟ್ಟು 48 ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಹೆಸರು:


Ad Widget

Ad Widget

Ad Widget

ಕಿರಿಯ ಸಹಾಯಕರು/ಕಿರಿಯ ಕ್ಷೇತ್ರಾಧಿಕಾರಿಗಳು, ಕಂಪ್ಯೂಟರ್ ಇಂಜಿನಿಯರ್, ಕಂಪ್ಯೂಟರ್ ಆಪರೇಟರ್, ವಾಹನ ಚಾಲಕರು, ಕಿರಿಯ ಸೇವಕರು (ಅಟೆಂಡರ್)

ಒಟ್ಟು ಹುದ್ದೆಗಳು: 48

ಶೈಕ್ಷಣಿಕ ಅರ್ಹತೆ:

ಕಿರಿಯ ಸಹಾಯಕರು: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ಹಾಗೂ ಸಹಕಾರ ವಿಷಯದಲ್ಲಿ ಅಧ್ಯಯನ, ಜ್ಞಾನ ಮತ್ತು ಅನುಭವ ಪಡೆದವರಿಗೆ ಆದ್ಯತೆ ನೀಡಲಾಗುವುದು.

ಕಂಪ್ಯೂಟರ್ ಇಂಜಿನಿಯರ್: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಪ್ರೊಗ್ರಾಮರ್, ಬಿ.ಇ. ಸಿ.ಎಸ್., ಇ&ಸಿ, ಇ&ಇ ಇಂಜಿನಿಯರಿಂಗ್/ ಎಂ.ಸಿ.ಎ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.

ಕಂಪ್ಯೂಟರ್ ಆಪರೇಟರ್: ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು ಅಥವಾ ಮೂರು ವರ್ಷದ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಉತ್ತೀರ್ಣರಾಗಿರಬೇಕು.

ವಾಹನ ಚಾಲಕರು: ಕನಿಷ್ಠ 10ನೇ ತರಗತಿ/ ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಊರ್ಜಿತ ಲಘು ವಾಹನ ಚಾಲನೆಯ ಲೈಸೆನ್ಸ್, ಬ್ಯಾಡ್ಜ್ ಹೊಂದಿರತಕ್ಕದ್ದು.

ಕಿರಿಯ ಸೇವಕರು (ಅಟೆಂಡರ್): ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಾನ:

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:

ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಪಡೆದ ಸರಾಸರಿ ಅಂಕಗಳನ್ನು ಶೇ. 85% ಕ್ಕೆ ಇಳಿಸಿ, ಪ್ರಾಪ್ತವಾಗುವ ಅಂಕಗಳ ಜೊತೆಗೆ ಸಂದರ್ಶನದಲ್ಲಿ ಗಳಿಸಿದ ಅಂಕಗಳನ್ನು ಕೂಡಿಸಿ ಅರ್ಹತಾ ಪಟ್ಟಿಯನ್ನು ತಯಾರಿಸಿ, ಮೀಸಲಾತಿ ನಿಯಮಗಳನ್ನು ಅನುಸರಿಸಿ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಿ ನೇಮಕಾತಿ ಮಾಡಿಕೊಳ್ಳಲಾಗುವುದು.

ಅರ್ಜಿ ಸಲ್ಲಿಕೆ ವಿಧಾನ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು. ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ (ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ಕರ್ತವ್ಯ ಸ್ಥಳ: ದಾವಣಗೆರೆ

ಅರ್ಜಿ ಶುಲ್ಕ:

ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು ರೂ. 1000 ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1ರ ಅಭ್ಯರ್ಥಿಗಳು ರೂ. 500 ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿ ವಿಧಾನ:

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 01, 2022

ಅರ್ಜಿ ಸಲ್ಲಿಸಲು:
https://bityl.co/C4MO

Leave a Reply

error: Content is protected !!
Scroll to Top
%d bloggers like this: