ಅಂಗನವಾಡಿಗಳಲ್ಲಿ ಉದ್ಯೋಗವಕಾಶ : 4th,10th ಪಾಸಾದವರು ಅರ್ಜಿ ಸಲ್ಲಿಸಬಹುದು| ಮೇ.30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ!

ಚಿಕ್ಕಬಳ್ಳಾಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಲ್ಲಿ 6 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿನ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಇಲ್ಲಿ ಮಿನಿ ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಮಾತ್ರವೇ ಅರ್ಜಿ ಸಲ್ಲಿಸಲು ಅವಕಾಶವಿರುವುದು. ಇತರೆ ಯಾವುದೇ ಮಾರ್ಗದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇಲ್ಲ. ಈ ಹುದ್ದೆಗೆ ಅರ್ಜಿ ಶುಲ್ಕ ಇರುವುದಿಲ್ಲ. ಯಾವುದೇ ಪರೀಕ್ಷೆ ನಡೆಸಲಾಗುವುದಿಲ್ಲ. ನಿಗದಿತ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಿ ಆಯ್ಕೆ ಮಾಡಲಾಗುತ್ತದೆ.

ಆನ್ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 30-04-2022
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-05-2022

ಹುದ್ದೆಗಳ ವಿವರ : ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳ ಸಂಖ್ಯೆ: 3
ಮಿನಿ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳ ಸಂಖ್ಯೆ: 3
ಅಂಗನವಾಡಿ ಸಹಾಯಕಿ ಹುದ್ದೆಗಳ ಸಂಖ್ಯೆ: 70

ಶೈಕ್ಷಣಿಕ ಅರ್ಹತೆಗಳು : ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 10ನೇ ತರಗತಿ,
ಅಂಗನವಾಡಿ ಸಹಾಯಕಿಯರ ಹುದ್ದೆಗೆ ಕನಿಷ್ಟ 4ನೇ ತರಗತಿ ತೇರ್ಗಡೆ, ಗರಿಷ್ಟ 9ನೇ ತರಗತಿ ತೇರ್ಗಡೆ ಹೊಂದಿರುವವರು ಸಹ ಅರ್ಜಿ ಸಲ್ಲಿಸಬಹುದು.
ಯಾವುದೇ ಹುದ್ದೆಗಳಿಗೆ 10 ನೇ ತರಗತಿ ನಂತರ ಹೆಚ್ಚಿನ ಶಿಕ್ಷಣ ಪಡೆದವರು ಅರ್ಜಿ ಸಲ್ಲಿಸಲು ಅವಕಾಶ ಇಲ್ಲ.

ವಯೋಮಿತಿ : ಕಾರ್ಯಕರ್ತೆ, ಸಹಾಯಕಿ ಯಾವುದೇ ಹುದ್ದೆಗಳಿಗೆ ಅಪ್ಲಿಕೇಶನ್ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 35 ವರ್ಷ ಮೀರಿರಬಾರದು.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave A Reply

Your email address will not be published.