ಚಾರ್ಮಾಡಿ ಘಾಟ್ ನಲ್ಲಿ ಅಪಘಾತವಾಗಿದ್ದ ವಾಹನ ಸವಾರರನ್ನು ಬೆದರಿಸಿ ದರೋಡೆ|ಬೆಳ್ತಂಗಡಿಯ ಮೂವರು ಮುಸ್ಲಿಂ ಯುವಕರು ವಶಕ್ಕೆ!
ಚಾರ್ಮಾಡಿ :ಚಾರ್ಮಾಡಿ ಘಾಟ್ ನಲ್ಲಿ ಅಪಘಾತವಾಗಿದ್ದ ವಾಹನದಲ್ಲಿದ್ದ ಸವಾರರನ್ನು ಬೆದರಿಸಿ, ಅವರಲ್ಲಿದ್ದ ಬೆಲೆ ಬಾಳುವ ವಸ್ತುಗಳನ್ನು ಕಸಿದುಕೊಂಡು ಹೋಗಿರುವ ಘಟನೆ ನಡೆದಿದೆ.
ಈ ಬಗ್ಗೆ ಬೆಂಗಳೂರಿನ ದೇವನಹಳ್ಳಿಯ ಮದುಸೂದನ್ ಎಂಬುವವರು ಬಣಕಲ್ ಠಾಣೆಗೆ ದೂರು ನೀಡಿದ್ದಾರೆ.
ಮೇ 3ರಂದು ದೇವನಹಳ್ಳಿಯಿಂದ ಚಾರ್ಮಾಡಿ ಘಾಟ್ ಮಾರ್ಗವಾಗಿ ಕಾರಿನಲ್ಲಿ ಹೊರಟಿದ್ದ ಕಾರು,ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ 12;30 ರ ಸುಮಾರಿಗೆ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಣ್ಣ ಗಾಯಗಳಾಗಿದ್ದು ಅಂಬುಲೆನ್ಸ್ ಗೆ ಕರೆ ಮಾಡಲು ನೆಟ್ ವರ್ಕ್ ಇಲ್ಲದೆ ಇರುವುದರಿಂದ ಕಾರಿನಲ್ಲೆ ಕುಳಿತಿದ್ದರು.
ಈ ಸಂದರ್ಭದಲ್ಲಿ ಧರ್ಮಸ್ಥಳ ಕಡೆಯಿಂದ ಮೂಡಿಗೆರೆ ಕಡೆಗೆ ಬೈಕ್ ಮತ್ತು ಸ್ಕೂಟರ್ ನಲ್ಲಿ ಬಂದ ಮೂವರು ಯುವಕರ ತಂಡ ಕಾರನ್ನು ಸುತ್ತುವರಿದು 600 ಹಣ, ಮೊಬೈಲ್ ಹಾಗೂ ಉಂಗುರವನ್ನು ಕಸಿದುಕೊಂಡು ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.ಬಳಿಕ ಕೃತ್ಯ ಎಸಗಿದ ಬೆಳ್ತಂಗಡಿ ಮೂಲದ ಮೂರು ಮುಸ್ಲಿಂ ಯುವಕರು ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.