ಅನಧಿಕೃತವಾಗಿ ಮನೆ ನಿರ್ಮಿಸಿದವರಿಗೆ ಅಕ್ರಮ-ಸಕ್ರಮ ಯೋಜನೆಯಡಿ ಸಕ್ರಮಗೊಳಿಸಲು ಸರ್ಕಾರ ಚಿಂತನೆ!

ಬೆಂಗಳೂರು: ಅನಧಿಕೃತವಾಗಿ ಮನೆ ನಿರ್ಮಿಸಿದವರಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು,ಅಕ್ರಮ-ಸಕ್ರಮ ಯೋಜನೆಯಡಿ ಸಕ್ರಮಗೊಳಿಸಲು ಸರ್ಕಾರ ಮುಂದಾಗಿದೆ.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ನಿರ್ಮಾಣಗೊಂಡ ಕಟ್ಟಡಗಳು, ಅನುಮೋದನೆ ಇಲ್ಲದ ಬಡಾವಣೆಗಳು, ನಕ್ಷೆ ಮಂಜೂರಾತಿ ಇಲ್ಲದೆ ನಿರ್ಮಾಣವಾಗಿರುವ ಲಕ್ಷಾಂತರ ಆಸ್ತಿಗಳಿದ್ದು, ಇವುಗಳಿಗೆ ಸ್ಥಳೀಯ ಸಂಸ್ಥೆಗಳಿಂದ ಕುಡಿಯುವ ನೀರು, ರಸ್ತೆ, ಚರಂಡಿ, ವಿದ್ಯುತ್ ಇತರೆ ಸೌಲಭ್ಯ ಕಲ್ಪಿಸಲಾಗಿದೆ. ಆದರೆ, ಅಕ್ರಮ ಕಟ್ಟಡಗಳ ಆಗಿರುವುದರಿಂದ ಸ್ಥಳೀಯ ಸಂಸ್ಥೆಗಳಿಗೆ ತೆರಿಗೆ ಸಂಗ್ರಹವಾಗುತ್ತಿಲ್ಲ.

ಈ ಹಿನ್ನೆಲೆಯಲ್ಲಿ ಅಕ್ರಮ ಕಟ್ಟಡಗಳನ್ನ ಒಂದು ಬಾರಿ ದಂಡಶುಲ್ಕದೊಂದಿಗೆ ಸಕ್ರಮಗೊಳಿಸಲು ಸರ್ಕಾರ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

Leave A Reply

Your email address will not be published.