ರೈತರಿಂದ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಂಗಳೂರು : ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ 2022-23ನೇ ಸಾಲಿನ ಕೃಷಿ ಪ್ರಶಸ್ತಿಗೆ ರೈತರಿಂದ ಹಾಗೂ ರೈತ ಮಹಿಳೆಯರಿಗೆ ಪತ್ಯೇಕವಾಗಿ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ.

ಸಾಮಾನ್ಯ ರೈತರಿಗೆ 100 ರೂ.ಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ 25 ರೂ. ನೋಂದಣಿ ಶುಲ್ಕವಿದೆ, ಕನಿಷ್ಠ ಒಂದು ಎಕರೆ ಪ್ರದೇಶದಲ್ಲಿ ಸ್ಪರ್ಧಾ ಬೆಳೆ ಬೆಳೆದಿರಬೇಕು ಹಾಗೂ ಸ್ವಂತ ಜಮೀನು ಇರುವ ಬಗ್ಗೆ ಪಹಣಿ ಪತ್ರ ಹೊಂದಿರಬೇಕು.

ನಿಬಂಧನೆಗಳು ಇವು:
ಯಾವುದೇ ಹಂತದಲ್ಲಿ ಒಮ್ಮೆ ಬಹುಮಾನ ಪಡೆದ ರೈತ, ರೈತ ಕುಟುಂಬದವರು ಮುಂದಿನ ಐದು ವರ್ಷಗಳ ಅವಧಿಗೆ ಆ ಹಂತದ ಬೆಳೆ ಸ್ಪರ್ಧೆಯ ಬಹುಮಾನಕ್ಕೆ ಅರ್ಹನಾಗಿರುವುದಿಲ್ಲ. ಆದರೆ ಆ ಬೆಳೆಯ ಮೇಲಿನ ಹಂತದ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿರುತ್ತದೆ.
ತಾಲ್ಲೂಕು ಮಟ್ಟದಲ್ಲಿ ಬಹುಮಾನ ಪಡೆದವರು ಜಿಲ್ಲಾ ಮಟ್ಟಕ್ಕೆ ಸ್ಪರ್ಧಿಸಬಹುದಾಗಿದೆ ಮತ್ತು ಜಿಲ್ಲಾ ಮಟ್ಟದಲ್ಲಿ ಬಹುಮಾನ ಪಡೆದವರು ರಾಜ್ಯ ಮಟ್ಟಕ್ಕೆ ಸ್ಪರ್ಧಿಸಬಹುದಾಗಿದೆ. ಆದರೆ ಕೆಳ ಹಂತದ ಸ್ಪರ್ಧೆಗೆ ಸ್ಪರ್ಧಿಸುವಂತಿಲ್ಲ. ಕಟಾವಿಗೆ 15 ದಿನಗಳ ಮುಂಚಿತವಾಗಿ ಸಂಬಂಧಿಸಿದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಕಟಾವು ದಿನಾಂಕ ತಿಳಿಸಬೇಕು.
ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಚಿಸುವ ರೈತರು ಸಂಬಂಧಿಸಿದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಿ ನಿಗದಿತ ಅರ್ಜಿ ನಮೂನೆ ಪಡೆದು ಕಂದಾಯ ಇಲಾಖೆಯಿಂದ ಪಡೆದ ಪಹಣಿ ಪತ್ರದೊಂದಿಗೆ ಶುಲ್ಕ ಪಾವತಿಸಿ ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.