ಸಂತಾನಹರಣ ಶಸ್ತ್ರಚಿಕಿತ್ಸೆ 25 ಜನ ಮಹಿಳೆಯರು ಮಾಡಿಸಿಕೊಂಡು ನಂತರ ಆದದ್ದೇನು?
ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಮಹಿಳೆಯರು ಬೆಡ್ ಸಿಗದೇ ಆಸ್ಪತ್ರೆಯ ನೆಲದ ಮೇಲೆ ಮಲಗಿದ ಘಟನೆ ತುಮಕೂರಿನಲ್ಲಿ ನಡೆದಿದ್ದು ಒಂದೇ ದಿನ 25 ಜನ ಮಹಿಳೆಯರು ಪರದಾಡಿದ್ದಾರೆ. ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ.
ತುಮಕೂರು ಜಿಲ್ಲೆಯ ಪಾವಗಡದ ಸರ್ಕಾರಿ ಆಸ್ಪತ್ರೆಯಲ್ಲಿ ಸುಮಾರು 25 ಕ್ಕೂ ಹೆಚ್ಚು ಜನ ಮಹಿಳೆಯರಿಗೆ ಏಕಕಾಲದಲ್ಲಿ ಸಂತಾನಹರಣ ಶಸಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆದರೆ ಅವರಿಗೆ ಬೆಡ್ ವ್ಯವಸ್ಥೆಗಳನ್ನು ಸರಿಯಾಗಿ ಮಾಡಿರಲಿಲ್ಲ. ಸಂತಾನಹರಣ ಶಸಸ್ತ್ರಚಿಕಿತ್ಸೆ ಮಾಡಿಕೊಂಡ ಮಹಿಳೆಯರು ಆಸ್ಪತ್ರೆಯೆ ಬಾಗಿಲು ಹಾಗೂ ಕೋಣೆಗಳ ಒಳಗೆ ಬರೀ ನೆಲದ ಮೇಲೆ ಮಲಗಿದ್ದರು.
ಮಹಿಳೆಯರು ಸಂತಾನ ಹರಣ ಚಿಕಿತ್ಸೆ ಮಾಡಿಸಿಕೊಳ್ಳುವ ಬಗ್ಗೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಮಾಹಿತಿ ಇದ್ದರು ಎಲ್ಲರೂ ಅಗತ್ಯ ಪೂರ್ವ ಸಿದ್ದತೆ ಕೈಗೊಂಡಿರಲಿಲ್ಲ. ಸೂಕ್ತ ಬೆಡ್ ವ್ಯವಸ್ಥೆ ಹಾಗೂ 24 ಗಂಟೆ ನಿಗಾವಹಿಸಬೇಕಾಗಿತ್ತು. ಆದರೆ, ಸಂಪೂರ್ಣ ನಿರ್ಲಕ್ಷ್ಯ ಮಾಡಿರುವುದು ಜನರ ಅಕ್ರೋಶಕ್ಕೆ ಕಾರಣವಾಗಿದೆ.