ಬೊಮ್ಮಾಯಿ ಸರ್ಕಾರದಿಂದ ವಸತಿ ರಹಿತರಿಗೆ ಗುಡ್ ನ್ಯೂಸ್| ಡಿಸೆಂಬರ್ ಒಳಗೆ ಒಟ್ಟು 6 ಲಕ್ಷ ಮನೆಗಳ ನಿರ್ಮಾಣ
ಬೆಂಗಳೂರು : ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ,ವಸತಿ ರಹಿತರಿಗೆ ಗುಡ್ ನ್ಯೂಸ್ ನೀಡಿದ್ದಾರೆ.ಅಮೃತ ಯೋಜನೆಯ ಮನೆಗಳನ್ನೂ ಒಳಗೊಂಡಂತೆ ಒಟ್ಟು 6 ಲಕ್ಷ ಮನೆಗಳನ್ನು ಡಿಸೆಂಬರ್ ಮಾಹೆಯೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದ್ದಾರೆ.
2022-23 ನೇ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಅವರು ಮಾತನಾಡಿ,ಈ ಮುಖ್ಯಾಂಶಗಳನ್ನು ತಿಳಿಸಿದ್ದಾರೆ.
- ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಗರಿಷ್ಠ ಮೂರು ತಿಂಗಳೊಳಗೆ ಮುಕ್ತಾಯವಾಗಬೇಕು.
- ನಿವೇಶನ ಹಂಚಿಕೆ ಸಂಬಂಧ ರಾಜ್ಯದ ವಿವಿಧ ಭಾಗಗಳಲ್ಲಿರುವ ಆಸ್ತಿಗೆ ಆದ್ಯತೆ ಮೇರೆಗೆ ಡಿಪಿಆರ್ ಮಾಡಿ ಸಲ್ಲಿಸುವುದು.
- 1 ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಯಡಿ ಪ್ರಗತಿಯಲ್ಲಿರುವ ಬಹುಮಹಡಿ ಮನೆಗಳ ನಿರ್ಮಾಣ ಕಾಮಗಾರಿಗಳ ಪೈಕಿ 20000 ಮನೆಗಳನ್ನು ಪೂರ್ಣಗೊಳಿಸುವ ಗುರಿ ಇದೆ.
- 20,000 ಮನೆಗಳನ್ನು ಪೂರ್ಣಗೊಳಿಸಲು ಅನುದಾನವನ್ನು ಹಂತ ಹಂತವಾಗಿ ಅನುದಾನ ಬಿಡುಗಡೆ ಮಾಡುವುದು. ಕೀಲಿ ಕೈ ಹಸ್ತಾಂತರ ಮಾಡುವ ಮುನ್ನ ಷರತ್ತುಗಳನ್ನು ವಿಧಿಸುವುದು.
- ಮುಗಿಯುವ ಹಂತದಲ್ಲಿರುವ ಮನೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಿ, ಸಾಲವನ್ನು ಫಲಾನುಭವಿಗಳ ಹೆಸರಿಗೆ ವರ್ಗಾವಣೆ ಮಾಡಿಸುವುದು.