HAL ನಲ್ಲಿ ಉದ್ಯೋಗವಕಾಶ | ಮೇ.24 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ವೇತನ ರೂ.40,000/-ರೂ.1,40,000/- ವರೆಗೆ!

ಬೆಂಗಳೂರಲ್ಲಿ  ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್(ಹೆಚ್ ಎಎಲ್) ಕಂಪನಿಯು ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆಯೊಂದನ್ನು ಹೊರಡಿಸಿದೆ.

 

ಹುದ್ದೆಗಳ ವಿವರ : ಭದ್ರತಾ ಅಧಿಕಾರಿ ಸೇರಿದಂತೆ ಅಧಿಕಾರಿ ಹುದ್ದೆಗಳು ಖಾಲಿ ಇದೆ. ಒಟ್ಟು 10 ಹುದ್ದೆಗಳು ಖಾಲಿ ಇದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಮೇ.24 ರೊಳಗೆ ಅರ್ಜಿ ಸಲ್ಲಿಸಬೇಕು.

ಶೈಕ್ಷಣಿಕ ವಿದ್ಯಾರ್ಹತೆ:  ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹುದ್ದೆಗೆ ಅನುಸಾರವಾಗಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿರಬೇಕು.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ UR/EWS ಅಭ್ಯರ್ಥಿಗಳು ಗರಿಷ್ಠ 35ವರ್ಷ, OBC ಅಭ್ಯರ್ಥಿಗಳು ಗರಿಷ್ಠ 38 ವರ್ಷ ಮತ್ತು SC/ST ಅಭ್ಯರ್ಥಿಗಳು 40 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.

ಅರ್ಜಿ ಶುಲ್ಕ: ಈ  ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ ಅಭ್ಯರ್ಥಿಗಳು ರೂ.500 ಮತ್ತು ಇತರ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಆಯ್ಕೆ ಪ್ರಕ್ರಿಯೆ:  ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆ, ಅನುಭವ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ ವಿವರ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.40,000 ದಿಂದ ರೂ. 1,40,000 ವೇತನ ದೊರೆಯಲಿದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ:
ವ್ಯವಸ್ಥಾಪಕರು (HR),
ನೇಮಕಾತಿ ವಿಭಾಗ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್,
ಕಾರ್ಪೊರೇಟ್ ಕಚೇರಿ 15/1 ಕಬ್ಬನ್ ರಸ್ತೆ,
ಬೆಂಗಳೂರು – 560001

Chief Manager (HR), Recruitment Section
Hindustan Aeronautics Limited
Corporate Office
15/1 Cubbon Road,
Bangalore 560001.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

Leave A Reply

Your email address will not be published.