ಇಂದು ಸಂಜೆ ಸಿಎಂ ಬೊಮ್ಮಾಯಿ ತುರ್ತು ಸುದ್ದಿಗೊಷ್ಠಿ!

ಇಂದು ಸಂಜೆ 4 ಗಂಟೆಗೆ ಸಿಎಂ ಬಸವರಾಜ್ ಬೊಮ್ಮಾಯಿ ದಿಢೀರ್ ಸುದ್ದಿಗೋಷ್ಠಿ ನಡೆಸಲಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಕೊರೊನಾ ವಿಷಯದ ಬಗ್ಗೆ ಎಂದು ಹಲವರು ಅಭಿಪ್ರಾಯ ಪಡುತ್ತಿದ್ದಾರೆ!

 

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಸಿ.ಟಿ.ರವಿ ಜಂಟಿ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಇಂದು ಸಿಎಂ ಬೊಮ್ಮಾಯಿ ನಡೆಸಲಿರುವ ಸುದ್ದಿಗೋಷ್ಠಿಯಲ್ಲಿ ಯಾವ ವಿಚಾರ ಪ್ರಸ್ತಾಪಿಸಲಿದ್ದಾರೆ ಎಂಬುದೇ ಸದ್ಯದ ಕುತೂಹಲವಾಗಿದೆ.

ಪಿಎಸ್‌ಐ ಹುದ್ದೆ ನೇಮಕಾತಿ ಅಕ್ರಮ, ಸಿಎಂ ಹುದ್ದೆಗೆ 2,500 ಕೋಟಿ ರೂಪಾಯಿ ಎಂಬ ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದು, ಗೃಹ ಸಚಿವರು ಹಾಗೂ ಉನ್ನತ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಈ ನಡುವೆ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿಯೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವೂ ಮಹತ್ವ ಪಡೆದುಕೊಂಡಿದ್ದು ಇದರ ಜೊತೆ ಕೊವಿಡ್ ಮಾರ್ಗಸೂಚಿ ಇಷ್ಟೇಲ್ಲಾ ಮಹತ್ವದ ವಿಷಯಗಳಿದ್ದು ಯಾವ ವಿಚಾರ ಪ್ರಸ್ತಾಪಿಸಲಿದ್ದಾರೆ ಎಂಬುದು ಕಾದು ನೋಡಬೇಕಾಗಿದೆ.

Leave A Reply

Your email address will not be published.