ವಿಟ್ಲ:ಇಲ್ಲಿನ ಪುಣಚ ಸಮೀಪದ ಪರಿಯಾಲ್ತಡ್ಕ ಎಂಬಲ್ಲಿ ಮಹಿಳೆಯೊಬ್ಬರ ಮೇಲೆ ಸಾರ್ವಜನಿಕವಾಗಿ ಗಂಭೀರ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆಯೊಂದು ಬೆಳಕಿಗೆ ಬಂದಿದ್ದು, ಗಂಭೀರ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಾಳು ಮಹಿಳೆಯನ್ನು ನಾಟೆಕಲ್ ನವಗ್ರಾಮ ನಿವಾಸಿ ಲತಾ ಪೂಜಾರಿ ಎಂದು ಗುರುತಿಸಲಾಗಿದ್ದು, ವಿಟ್ಲ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆತರಲಾಗಿದ್ದು, ಗಂಭೀರ ಹಲ್ಲೆಯ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.