ಮದುವೆ ಸಮಾರಂಭದಲ್ಲಿ ಊಟ ‌ಸೇವಿಸಿದ್ದ 85 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು !!

ಮದುವೆ ಸಮಾರಂಭದಲ್ಲಿ ಆಹಾರ ಸೇವಿಸಿದ್ದ ಸುಮಾರು 85ಕ್ಕೂ ಅಧಿಕ ಮಂದಿಗೆ ವಾಂತಿ, ಭೇದಿ ಕಾಣಿಸಿಕೊಂಡು ಅಸ್ವಸ್ಥರಾದ ಪರಿಣಾಮ ಆಸ್ಪತ್ರೆಗೆ ದಾಖಲಾದ ಘಟನೆ ಶಿವಮೊಗ್ಗದ ಗೆಜ್ಜೇನಹಳ್ಳಿಯಲ್ಲಿ ನಡೆದಿದೆ.

ಶಿವಮೊಗ್ಗದ ಗೆಜ್ಜೇನಹಳ್ಳಿಯಲ್ಲಿ ಶುಕ್ರವಾರ ಮದುವೆ ಸಮಾರಂಭ ನಡೆದಿತ್ತು. ಈ ಸಮಾರಂಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿ ಊಟ ಮಾಡಿದ್ದರು. ಊಟ ಮಾಡಿದ್ದ ಮಕ್ಕಳು ಸೇರಿದಂತೆ ಕೆಲವರಿಗೆ ವಾಂತಿ, ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದರು. ಅಸ್ವಸ್ಥಗೊಂಡವರನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.


Ad Widget

Ad Widget

Ad Widget

ಸದ್ಯ ಎಲ್ಲರಿಗೂ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಆಹಾರದಲ್ಲಿ ವ್ಯತ್ಯಾಸ ಕಂಡುಬಂದಿದ್ದರಿಂದ ಈ ರೀತಿ ಆಗಿದೆ. ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮೆಗ್ಗಾನ್ ಆಸ್ಪತ್ರೆ ಅಧೀಕ್ಷಕ ಡಾ.ಶ್ರೀಧರ್ ತಿಳಿಸಿದ್ದಾರೆ.

Leave a Reply

error: Content is protected !!
Scroll to Top
%d bloggers like this: