ಆಪರೇಶನ್ ಕಮಲ ಅನಿವಾರ್ಯ ಎಂದ ನಳಿನ್ ಕುಮಾರ್ ಕಟೀಲ್
ಬೆಂಗಳೂರು: ಬಿಜೆಪಿ ಯುವ ಮೋರ್ಛಾ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲು, ಆಪರೇಷನ್ ಕಮಲ ಅನಿವಾರ್ಯ ಎಂದು ಇಂದು ಬೆಂಗಳೂರಿನಲ್ಲಿ ಹೇಳಿದ್ದಾರೆ. ಆಮೂಲಕ ಮತ್ತಷ್ಟು ಆಪರೇಶನ್ ಕಮಲ ನಡೆಯುವ ಮುನ್ಸೂಚನೆ ನೀಡಿದ್ದಾರೆ.
ನಿನ್ನೆ ಜೆಡಿಎಸ್ ಹಾಗೂ ಕಾಂಗ್ರೆಸ್ ನ ಹಲವು ನಾಯಕರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಆಪರೇಷನ್ ಕಮಲದ ಮೂಲಕ ಅವರನ್ನು ಸೇರ್ಪಡೆಗೊಳಿಸಲಾಗಿದೆ ಎಂದೇ ರಾಜಕೀಯ ಮುಖಂಡರು ಆರೋಪಿಸುತ್ತಿದ್ದರು. ಆದರೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ತಮ್ಮ ಆಪರೇಷನ್ ಕಮಲ ಸಮರ್ಥಿಸಿಕೊಂಡಿದ್ದಾರೆ.
ಆಪರೇಷನ್ ಕಮಲ ಮಾಡಿದಾಗ ಬೇರೆ ಪಕ್ಷಗಳಿಂದ ಕರೆದುಕೊಂಡು ಬರೋದೇ ನಿಮ್ಮ ಕೆಲಸನಾ ಅಂತ ಬಹಳ ಜನ ಕೇಳಿದರು. ಒಂದು ರಾಜಕೀಯ ಪಕ್ಷ ಅಧಿಕಾರ ಹಿಡಿಯಲು ಇದು ಅನಿವಾರ್ಯ ಎಂದು ಹೇಳಿದ್ದಾರೆ.ಅಧಿಕಾರಕ್ಕಾಗಿ ಆಪರೇಷನ್ ಕಮಲ ಮಾಡಿರಬಹುದು. ಆದ್ರೆ ನಮ್ಮ ಪಕ್ಷದಲ್ಲಿ ಪಕ್ಷಕ್ಕಾಗಿ ದುಡಿದವರು, ಸಾಮಾನ್ಯ ಕಾರ್ಯಕರ್ತನಿಗೂ ಶಾಸಕ ಮಾಡುತ್ತೇವೆ. ನಮ್ಮದು ಅಧಿಕಾರಕ್ಕಾಗಿ ಆದರ್ಶ ಅಲ್ಲ ಎಂದು ನಳೀನ್ ಕುಮಾರ್ ಕಟೀಲು ಹೇಳಿದ್ದಾರೆ.
‘ಕಾಂಗ್ರೆಸ್ ನಲ್ಲಿ ಈಗಲೂ ಇಂದಿರಾಗಾಂಧಿ, ಸೋನಿಯಾಗಾಂಧಿ,ರಾಹುಲ್ ಗಾಂಧಿಗೆ ಜೈ ಅಂತಾರೆ. ನಾವು ಭಾರತ ಮಾತೆಗೆ ಜೈಕಾರ ಹಾಕುತ್ತೇವೆ ‘ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಹೇಳಿದ್ದಾರೆ.ಯಡಿಯೂರಪ್ಪ ಮಾರ್ಗದರ್ಶನ, ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆಯನ್ನ ಗೆಲ್ಲುತ್ತೇವೆ. ಕಾಂಗ್ರೆಸ್,ಜೆಡಿಎಸ್‌ನಿಂದ ಬಹಳ ಜನ ಬಿಜೆಪಿ ಬಾಗಿಲು ತಟ್ಟುತ್ತಿದ್ದಾರೆ. ನಾವು ಲಿಸ್ಟ್ ಮಾಡ್ಕೊಂಡು ಸೇರ್ಪಡೆ ಮಾಡಿಕೊಳ್ಳುತ್ತಿದ್ದೇವೆ ಎಂಬುದಾಗಿ ಪುನರ್ ಉಚ್ಛರಿಸಿದರು.