ಇನ್ನು ಮುಂದೆ ಬೀದಿಯಲ್ಲಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ !! | ಸಿಎಂ ಯೋಗಿ ಆದಿತ್ಯನಾಥ್ ಖಡಕ್ ಆದೇಶ

ಇತ್ತೀಚೆಗೆ ದೇಶದಲ್ಲಿ ಧಾರ್ಮಿಕ ವಿಷಯದಲ್ಲಿ ಗಲಭೆಗಳು ಸಾಕಷ್ಟು ನಡೆದುಹೋಗಿದೆ. ಆದರೆ ಉತ್ತರಪ್ರದೇಶದಲ್ಲಿ ಈ ರೀತಿಯ ಗಲಾಟೆಗಳಿಗೆ ಇನ್ನು ಮುಂದೆ ಕಡಿವಾಣ ಬೀಳಲಿದೆ. ಬೀದಿಯಲ್ಲಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ ಹೊರಡಿಸಿದ್ದಾರೆ.

ಆಯಾ ಧಾರ್ಮಿಕ ಸಮಾರಂಭಗಳು ಆಯಾ ಕೇಂದ್ರಗಳ ವ್ಯಾಪ್ತಿಯಲ್ಲೇ ಆಚರಣೆ ಮಾಡಬೇಕಿದೆ. ಅದು ಬಿಟ್ಟು ಬೀದಿಬದಿಗಳಲ್ಲಿ ಮಾಡುವುದಕ್ಕೆ ಅವಕಾಶ ನೀಡಬೇಡಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಯಾರು ಈ ರೀತಿಯ ಆಚರಣೆಗಳಿಗೆ ಅವಕಾಶ ನೀಡಬಾರದು. ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಹಾಗೂ ಪೊಲೀಸರಿಗೆ ಹೇಳಿದ್ದಾರೆ. ಇನ್ನು ಇತ್ತೀಚೆಗೆ ಭಾರೀ ಸದ್ದು ಮಾಡಿದ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಅವರು, ಪೊಲೀಸರು ತನಿಖೆ ವಿಳಂಬ ಮಾಡುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿ, ಶೀಘ್ರ ತನಿಖೆ ನಡೆಸಬೇಕೆಂದು ಸೂಚಿಸಿದ್ದಾರೆ.

Leave A Reply

Your email address will not be published.