ಕೋವಿಡ್ ಕರಿಛಾಯೆ : ದೇಶದಲ್ಲಿ ಸೋಂಕಿತರ ಸಾವಿನಲ್ಲಿ ಏರಿಕೆ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, 4ನೇ ಅಲೆ ಆತಂಕ ಆರಂಭವಾಗಿದೆ. ಈ ನಡುವೆ ಶನಿವಾರಕ್ಕಿಂತ ಸೋಂಕಿತರ ಸಂಖ್ಯೆ ಭಾನುವಾರ ಕಡಿಮೆ ದಾಖಲಾಗಿದೆ. ಕಳೆದ 24 ಗಂಟೆಯಲ್ಲಿ 3,451 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

 

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ 40 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 524064ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 20635 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 3079 ಜನರು ಕೋಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 42557495 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. 17,39,403 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,90,20,07,487 ಡೋಸ್ ಲಸಿಕೆ ಹಾಕಲಾಗಿದೆ.

Leave A Reply

Your email address will not be published.