ಧರ್ಮಸ್ಥಳ : ಸೋಮನಾಥ್ ನಾಯಕ್‌ಗೆ ಜೈಲುಶಿಕ್ಷೆ ಖಾಯಂಗೊಳಿಸಿದ ಹೈಕೋರ್ಟ್

ಬೆಳ್ತಂಗಡಿ : ಬೆಳ್ತಂಗಡಿ ನ್ಯಾಯಾಲಯದ ಪ್ರತಿಬಂಧಕಾಜ್ಞೆಯನ್ನು ಉಲ್ಲಂಘಿಸಿ ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಅಪಪ್ರಚಾರ ಮಾಡುತ್ತಿದ್ದ ಗುರುವಾಯನಕೆರೆಯ ನಾಗರಿಕ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೆ.ಸೋಮನಾಥ ನಾಯಕ್ ಗೆ ನ್ಯಾಯಾಲಯ ವಿಧಿಸಿದ ಜೈಲುಶಿಕ್ಷೆ, ಆಸ್ತಿ ಮುಟ್ಟುಗೋಲು ಹಾಗು ದಂಡನೆಯನ್ನು ರದ್ದುಗೊಳಿಸುವಂತೆ ಕರ್ನಾಟಕ ಉಚ್ಚ ನ್ಯಾಯಾಲಯಕ್ಕೆ ರಿಟ್ ಅರ್ಜಿ ಸಲ್ಲಿಸಿದ್ದರು.

 

ಎರಡೂ ಕಡೆಯ ವಾದ ಆಲಿಸಿದ ಉಚ್ಚ ನ್ಯಾಯಾಲಯವು ಮೇ.5ರಂದು ತನ್ನ 148 ಪಟಗಳ ಸುಧೀರ್ಘ ತೀರ್ಪು ಪ್ರಕಟಿಸಿ ಬೆಳ್ತಂಗಡಿ ಸಿವಿಲ್ ನ್ಯಾಯಾಲಯಗಳ ಆದೇಶವನ್ನು ಎತ್ತಿ ಹಿಡಿದು ಸೋಮನಾಥ ನಾಯಕ್ ಅವರ ರಿಟ್ ಅರ್ಜಿಯನ್ನು ವಜಾಗೊಳಿಸಿದೆ.

Leave A Reply

Your email address will not be published.