ಒಲೆಯಲ್ಲಿ ತಿಂಡಿ ಮಾಡುತ್ತಿರುವಾಗ ಸೀರೆಗೆ ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದ ವೃದ್ಧೆ ಸಾವು!

ಕಾರ್ಕಳ: ಒಲೆಯಲ್ಲಿ ತಿಂಡಿ ಮಾಡುತ್ತಿರುವಾಗ ಸೀರೆಗೆ ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆಯೋರ್ವರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಸಾಣೂರು ಗ್ರಾಮದಲ್ಲಿ ನಡೆದಿದೆ.

 

ಮೃತರನ್ನು ಸುಮತಿ ಶೆಟ್ಟಿ(71ವ)ಎಂದು ಗುರುತಿಸಲಾಗಿದೆ.

ಘಟನೆಯ ವಿವರ:
ಏ.4ರಂದು ಬೆಳಿಗ್ಗೆ ಅಡುಗೆ ಮನೆಯಲ್ಲಿ ಕಟ್ಟಿಗೆ ಒಲೆಯಲ್ಲಿ ತಿಂಡಿ ಮಾಡುತ್ತಿರುವಾಗ ಆಕಸ್ಮಿಕವಾಗಿ ಸೀರೆಯ ಸೆರಗಿಗೆ ಬೆಂಕಿ ತಗಲಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡವರನ್ನು ಆಳ್ವಾಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಚಿಕಿತ್ಸೆ ಪಡೆದು ಗುಣಮುಖವಾಗಿ ಮನೆಗೆ ಬಂದಿದ್ದರು. ಕೆಲವು ದಿನಗಳ ಬಳಿಕ ಗಾಯ ಮತ್ತೆ ಉಲ್ಬಣಗೊಂಡಿದ್ದು, ಚಿಕಿತ್ಸೆಗಾಗಿ ಕಾರ್ಕಳ ಸರ್ಕಾರಿ ಆಸ್ಪತ್ರೆ ಹಾಗೂ ಉಡುಪಿ ಅಜ್ಜರಕಾಡಿನ ಆಸ್ಪತ್ರೆ ದಾಖಲಿಸಲಾಗಿತ್ತು.

ಆ ನಂತರ ಏ.30ರಂದು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಮತಿ ಶೆಟ್ಟಿ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.