ಮಂಗಳೂರು : ಆಜಾನ್ ಗೆ ವಿರುದ್ಧವಾಗಿ ಮೊಳಗಿದ ಕೊರಗಜ್ಜನ ಭಕ್ತಿ ಗೀತೆ

ಮಂಗಳೂರು: ರಾಜ್ಯದಲ್ಲಿ ಆಜಾನ್ ವಿಚಾರದಲ್ಲಿ
ಶ್ರೀರಾಮ ಸೇನೆ ಸೇರಿ ಕೆಲ ಹಿಂದೂ ಪರ ಸಂಘಟನೆಗಳು ಸುಪ್ರಭಾತ ಮೊಳಗಿಸುವ ಪಣ ತೊಟ್ಟಿದ್ದವು. ಹಾಗಾಗಿ ಇಂದು ಸೋಮವಾರ ಮೂಡುಶೆಡ್ಡೆ ಗ್ರಾಮದಲ್ಲಿರುವ ಶಿವಾಜಿ ಪ್ರತಿಮೆ ಬಳಿ ಇರುವ ಅಯ್ಯಪ್ಪ ಭಕ್ತ ವೃಂದದ ತಾತ್ಕಾಲಿಕ ಶೆಡ್ ಮುಂಭಾಗದಲ್ಲಿ ಮೈಕ್ ಅಳವಡಿಸಿ, ಬೆಳಗ್ಗೆ 5 ಗಂಟೆಯಿಂದ 6 ಗಂಟೆಯವರೆಗೆ ಕೊರಗಜ್ಜನ ಭಕ್ತಿ ಗೀತೆಗಳನ್ನು ಹಾಕಿದ್ದಾರೆ.

 

ಮೂಡುಶೆಡ್ಡೆಯಲ್ಲಿರುವ ಮಸೀದಿಯಿಂದ ಸುಮಾರು 250 ಮೀಟರ್ ದೂರದಲ್ಲಿ ಅಯ್ಯಪ್ಪ ಸ್ವಾಮಿ ಶೆಡ್ ಇದೆ. ಇದರ ನೇತೃತ್ವವನ್ನು ಶ್ರೀ ರಾಮಸೇನೆಯ ಜಿಲ್ಲಾಧ್ಯಕ್ಷ ಪ್ರದೀಪ್ ಮೂಡುಶೆಡ್ಡೆ ವಹಿಸಿದ್ದು, ಇಬ್ಬರು ಶ್ರೀರಾಮಸೇನೆ ಕಾರ್ಯಕರ್ತರು ಇದ್ದರು.

ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave A Reply

Your email address will not be published.