ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆ
ಶ್ರೀಲಂಕಾದಲ್ಲಿ ಉಂಟಾಗಿದ್ದಂತಹ ಆರ್ಥಿಕ ತುರ್ತು ಪರಿಸ್ಥಿತಿಯ ಕಾರಣ, ದೇಶದಲ್ಲಿ ನಿಯಂತ್ರಣ ಕ್ರಮವಾಗಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿತ್ತು.ಇದರಿಂದ ಸರ್ಕಾರದ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಯು ತೀವ್ರಗೊಂಡಿತ್ತು.ಈ ಹಿನ್ನಲೆಯಲ್ಲಿ ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರು, ತಮ್ಮ ಪ್ರಧಾನಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಶುಕ್ರವಾರ ನಡೆದ ವಿಶೇಷ ಸಭೆಯಲ್ಲಿ ಅಧ್ಯಕ್ಷ
ಗೊಟಬಯಾ ರಾಜಪಕ್ಸೆ,ದೇಶದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿಗೆ ಪರಿಹಾರವಾಗಿ ಅಧಿಕಾರದಿಂದ ಕೆಳಗಿಳಿಯುವಂತೆ ಪ್ರಧಾನಿಗೆ ತಿಳಿಸಿದ್ದರು. ಮೂರು ದಿನಗಳ ನಂತರ ಪ್ರಧಾನಿ ಮಹಿಂದಾ ಆರ್ಥಿಕ ಪರಿಸ್ಥಿತಿ ನಿಯಂತ್ರಿಸಲಾಗದೆ ಅಧಿಕಾರದಿಂದ ಕೆಳಗಿದಿದ್ದಾರೆ.
ಇದೀಗ ಪ್ರಧಾನಿ ರಾಜೀನಾಮೆ ನೀಡಿದ್ದು, ಅಧ್ಯಕ್ಷ ರಾಜಪಕ್ಷ ಅವರು ಸಂಸತ್ತಿನಲ್ಲಿ ಎಲ್ಲಾ ರಾಜಕೀಯ ಪಕ್ಷಗಳನ್ನು ಸರ್ವಪಕ್ಷಗಳ ಸಂಪುಟ ರಚನೆಗೆ ಆಹ್ವಾನಿಸುವ ನಿರೀಕ್ಷೆಯಿದೆ.ಈ ಕುರಿತಂತೆ ಶ್ರೀಲಂಕಾ ಸ್ಥಳೀಯ ಮಾಧ್ಯಮಗಳು ವರದಿಯನ್ನು ಮಾಡಿದೆ.
ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆ ನೀಡಬೇಕು ಎಂದು ಇಂದು ಬೆಳಗ್ಗೆ ಪ್ರತಿಭಟನಾಕಾರರು ಪ್ರಧಾನಿಯವರ ಅಧಿಕೃತ ನಿವಾಸವಾದ ಟೆಂಪಲ್ ಟ್ರೀಸ್ ಎದುರು ಹೋರಾಟ ತೀವ್ರಗೊಳಿಸಿದರು.ಇದಕ್ಕೆ ಪ್ರಧಾನಿ, ಸಾರ್ವಜನಿಕರು ಸಂಯಮದಿಂದ ವರ್ತಿಸಬೇಕೆಂದು.ಹಿಂಸೆಯು ಹಿಂಸೆಯನ್ನು ಮಾತ್ರ ಹುಟ್ಟುಹಾಕುತ್ತದೆ ಎಂಬುದನ್ನು ನೆನಪಿನಲ್ಲಿಡಿ. ಈಗಿನ ಬಿಕ್ಕಟ್ಟಿಗೆ ಆರ್ಥಿಕ ಪರಿಹಾರದ ಅಗತ್ಯವಿದೆ. ಈ ಆಡಳಿತವು ಬಿಕ್ಕಟ್ಟು ಪರಿಹರಿಸಲು ಬದ್ಧವಾಗಿದೆ ಎಂದು ಟ್ವಿಟ್ ಮಾಡಿದ್ದರು. ಇದರ ಬೆನ್ನಲ್ಲೇ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.