ಉಡುಪಿ:ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ಸಾಗುತ್ತಿದ್ದ ವೇಳೆ ಕುಸಿದು ಬಿದ್ದು ವ್ಯಕ್ತಿ ಸಾವು!

ಉಡುಪಿ:ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನಕ್ಕೆ ತೆರಳುತ್ತಿದ್ದ ವೇಳೆ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.

 

ಮೃತರನ್ನು ಬೆಂಗಳೂರಿನ ಮೋಹನ್ (70)ಎಂದು ಗುರುತಿಸಲಾಗಿದೆ.

ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ಸಾಗುತ್ತಿದ್ದ ವೇಳೆ ಮೋಹನ್ ಎಂಬುವವರು ದಿಢೀರ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಎಂಬುವವರು ಶ್ರೀಕೃಷ್ಣ ಮಠದ ರಕ್ಷಣ ಸಿಬ್ಬಂದಿ ಸಹಕಾರದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.ಆದರೆ ಆ ವೇಳೆ ಅವರು ಮೃತಪಟ್ಟಿದ್ದರು ಎನ್ನಲಾಗಿದೆ.

Leave A Reply

Your email address will not be published.