15,000 ಶಿಕ್ಷಕರ ಹುದ್ದೆಗಳಿಗೆ ಮೇ 21, 22 ರಂದು ಸಿಇಟಿ : ಮೇ 14ರಂದು ಪರೀಕ್ಷಾ ಮಾರ್ಗಸೂಚಿ – ಬಿ.ಸಿ ನಾಗೇಶ್

0 6

ಮೇ 21, 22ರಂದು ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ 15,000 ಹುದ್ದೆಗಳಿಗೆ ಸಿಇಟಿ ಪರೀಕ್ಷೆ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ನಾಗೇಶ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಶಿಕ್ಷಣ ಸಚಿವರು, ‘ಮೇ 21, 22ರಂದು ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ 15,000 ಹುದ್ದೆಗಳಿಗೆ ಸಿಇಟಿ ಪರೀಕ್ಷೆ ನಡೆಸಲಾಗುವುದು. ರಾಜ್ಯದ 435 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಸೂಕ್ತ ಕ್ರಮಗಳ ಬಗ್ಗೆ ಗೃಹ ಇಲಾಖೆ ಜೊತೆ ಚರ್ಚಿಸಿದ್ದೇವೆ’ ಎಂದರು.

ಪ್ರತಿ ಕೇಂದ್ರದಲ್ಲಿ 20 ಅಭ್ಯರ್ಥಿಗಳಿಗೆ ಮಾತ್ರ ಪರೀಕ್ಷೆಗೆ ಅವಕಾಶ ನೀಡಲಾಗುವುದು. ಇನ್ನು ಪರೀಕ್ಷಾ ಕೇಂದ್ರದಲ್ಲಿ ಸಿಸಿ ಕ್ಯಾಮರಾ ಅವಳವಡಿಸಿಕೊಳ್ಳಲಾಗುವುದು. ಪರೀಕ್ಷೆಗೆ ಯಾವುದೇ ಡ್ರೆಸ್ ಕೋಡ್ ನಿಗದಿ ಪಡಿಸಿಲ್ಲ. ಪರೀಕ್ಷಾ ಕೇಂದ್ರದ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗುವುದು. ಅದರಂತೆ, ಮೇ 14ರಂದು ಪರೀಕ್ಷಾ ಮಾರ್ಗಸೂಚಿ ಬಿಡುಗಡೆ ಮಾಡುತ್ತೇವೆ’ ಎಂದು ಹೇಳಿದ್ದಾರೆ.

Leave A Reply