ಸಂತೂರ್ ವಾದಕ ಪಂಡಿತ್ ಶಿವಕುಮಾರ್ ಶರ್ಮಾ ಹೃದಯಾಘಾತದಿಂದ ನಿಧನ

ನವದೆಹಲಿ: ಖ್ಯಾತ ಭಾರತೀಯ ಸಂಗೀತ ಸಂಯೋಜಕ ಮತ್ತು ಸಂತೂರ್ ವಾದಕ ಪಂಡಿತ್ ಶಿವಕುಮಾರ್ ಶರ್ಮಾ ಅವರು 84 ವರ್ಷದ ಸುದೀರ್ಘ ಪಯಣದ ಬಳಿಕ ಇಂದು ಮುಂಬೈನಲ್ಲಿ ಕೊನೆ ಉಸಿರೆಳೆದಿದ್ದಾರೆ.

ಶರ್ಮಾ ಕಳೆದ ಆರು ತಿಂಗಳಿನಿಂದ ಮೂತ್ರಪಿಂಡಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ಬಳಲುತ್ತಿದ್ದರು ಮತ್ತು ಡಯಾಲಿಸಿಸ್ ಗೆ ಒಳಗಾಗಿದ್ದರು. ಇಂದು ಹೃದಯಾಘಾತಕ್ಕೆ ಒಳಗಾಗಿ, ನಿಧನರಾಗಿದ್ದಾರೆ.

ಖ್ಯಾತ ಸಂತೂರ್ ವಾದಕ ಪಂಡಿತ್ ಶಿವಕುಮಾರ್ ಶರ್ಮಾ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಟ್ವಿಟ್ಟರ್ ನಲ್ಲಿ ಸಂತಾಪ ಸೂಚಿಸಿದ್ದಾರೆ.’ಪಂಡಿತ್ ಶಿವಕುಮಾರ್ ಶರ್ಮಾ ಅವರ ನಿಧನದಿಂದ ನಮ್ಮ ಸಾಂಸ್ಕೃತಿಕ ಜಗತ್ತು ಬಡವಾಗಿದೆ. ಅವರು ಸಂತೂರ್ ಅನ್ನು ಜಾಗತಿಕ ಮಟ್ಟದಲ್ಲಿ ಜನಪ್ರಿಯಗೊಳಿಸಿದರು. ಅವರ ಸಂಗೀತವು ಮುಂದಿನ ಪೀಳಿಗೆಯನ್ನು ಆಕರ್ಷಿಸುವುದನ್ನು ಮುಂದುವರಿಸುತ್ತದೆ. ಅವರೊಂದಿಗಿನ ನನ್ನ ಒಡನಾಟಗಳನ್ನು ನಾನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತೇನೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ’ ಎಂದಿದ್ದಾರೆ.

Leave A Reply

Your email address will not be published.