ಇಡೀ ದೇಶಾದ್ಯಂತ ಕಾರ್ಪೊರೇಷನ್ ಎಲೆಕ್ಷನ್ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು !

Share the Article

ಬೆಂಗಳೂರು : ಸ್ಥಳೀಯ ಸಂಸ್ಥೆಗಳ ಚುನಾವಣೆಗೆ
ಸಂಬಂಧಿಸಿದಂತೆ ಎಲ್ಲಾ ರಾಜ್ಯಗಳಿಗೂ ಅನ್ವಯವಾಗುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ತೀರ್ಪು ನೀಡಿದ್ದು, ಶೀಘ್ರದಲ್ಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಬಿಬಿಎಂಪಿ ಚುನಾವಣೆ ನಡೆಸಲು ಸುಪ್ರೀಕೋರ್ಟ್ ಸೂಚನೆ ನೀಡಿದೆ. ಇಡೀ ದೇಶಾದ್ಯಂತ ಕಾರ್ಪೋರೇಷನ್ ಎಲೆಕ್ಷನ್ ನಡೆಸಲು ಸುಪ್ರೀಂಕೋರ್ಟ್ ತ್ರಿದಸ್ಯ ಪೀಠ ಮಹತ್ವದ ತೀರ್ಪು ನೀಡಿದೆ.

ಈ ಹಿನ್ನೆಲೆಯಲ್ಲಿ 198 ವಾರ್ಡ್‌ಗಳಿಗೆ ಮಾತ್ರ ಈ ಬಾರಿ ಚುನಾವಣೆ ನಡೆಯಲಿದೆ. ಎರಡು ವಾರದಲ್ಲಿ ನೋಟಿಫಿಕೇಷನ್ ಹೊರಡಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ.

ಸುರೇಶ್ ಮೋಹನ್ ಮತ್ತು ಮಧ್ಯಪ್ರದೇಶದ ನಡುವೆ ಇದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಹಳೇ ವಾರ್ಡ್ ಸಂಖ್ಯೆಗೆ ಚುನಾವಣೆ ಮಾಡಿ ಎಸ್ಸಿ, ಎಸ್ಟಿ ಮೀಸಲಾತಿ ಹೊರತು ಪಡಿಸಿ ಉಳಿದವುಗಳನ್ನು ಜನರಲ್ ಎಂದು ಪರಿಗಣಿಸಿ ಚುನಾವಣೆ ನಡೆಸಿ ಎಂದು ತೀರ್ಪು ನೀಡಿದೆ.

ಕರ್ನಾಟಕ ನಗರ ಪಾಲಿಕೆಯ ಮೂರನೇ ತಿದ್ದುಪಡಿ ಕಾಯಿದೆ (2020) ಅನುಸಾರ 243 ವಾರ್ಡ್‌ಗಳಿಗೆ ಬದಲಾಗಿ 2020ರ ಸೆ.23ರಂದು ಹೊರಡಿಸಿರುವ ಅಧಿಸೂಚನೆಯಂತೆ 198 ವಾರ್ಡ್‌ಗಳಿಗೆ ಆರು ವಾರಗಳ ಒಳಗಾಗಿ ಚುನಾವಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ 2020ರ ಡಿಸೆಂಬರ್ 4ರಂದು ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು.

ನಂತರ ರಾಜ್ಯ ವಿಧಾನಸಭೆಯು ಹೈಕೋರ್ಟ್‌ ಆದೇಶವನ್ನು ರದ್ದುಪಡಿಸಿ 243 ವಾರ್ಡ್‌ಗಳಿಗೆ ಚುನಾವಣೆ ನಡೆಸಬೇಕು ಎಂಬ ನಿರ್ಣಯ ಅಂಗೀಕರಿಸಿತ್ತು. ಅಲ್ಲದೇ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು

Leave A Reply

Your email address will not be published.