ಅಸನಿ ಚಂಡಮಾರುತ ಎಫೆಕ್ಟ್ ;ಗುರುವಾರದವರೆಗೂ ಮುಂದುವರಿಯಲಿದೆ ವರುಣನ ಆರ್ಭಟ!

ಬೆಂಗಳೂರು: ಅಸನಿ ಚಂಡಮಾರುತದಿಂದ ಮಳೆಯ ಆರ್ಭಟ ಹೆಚ್ಚಿದ್ದು,ಗುರುವಾರದವರೆಗೆ ಗುಡುಗು ಹಾಗೂ ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗಂಟೆಗೆ 105 ಕಿ.ಮೀ. ವೇಗದ ಗಾಳಿಯೊಂದಿಗೆ ಪೂರ್ವ ಕರಾವಳಿಯನ್ನು ತಲುಪಿರುವ ಅಸಾನಿ ಚಂಡಮಾರುತವು ಹಲವು ರಾಜ್ಯಗಳ ಜನಜೀವನವನ್ನು ಅಲ್ಲೋಲ ಕಲ್ಲೋಲವಾಗಿಸಿದೆ.ಮಂಗಳವಾರ ರಾತ್ರಿ ವೇಳೆಗೆ ಚಂಡಮಾರುತದ ತೀವ್ರತೆ ಕಡಿಮೆಯಾಗಿದ್ದರೂ, ಸೈಕ್ಲೋನ್‌ ಪ್ರಭಾವವೆಂಬಂತೆ ಪಶ್ಚಿಮ ಬಂಗಾಲ, ಆಂಧ್ರಪ್ರದೇಶ, ಒಡಿಶಾ, ತಮಿಳುನಾಡು ಹಾಗೂ ಕೇರಳಗಳಲ್ಲಿ ಭಾರೀ ಗಾಳಿ ಮಳೆಯಾಗಿದೆ.

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನಿನ್ನೆ ಯೊಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದ್ದು,ಅಸನಿ ಚಂಡಮಾರುತ ಆಂಧ್ರ ಪ್ರದೇಶದ ವಿಶಾಖಪಟ್ಟಣ, ಒಡಿಶಾದ ಪುರಿಯತ್ತ ಚಲಿಸುತ್ತಿರುವುದರಿಂದ ಮೇ 12ರ ತನಕ ವಿವಿಧ ರಾಜ್ಯಗಳಲ್ಲಿ ಮಳೆಯಾಗಲಿದೆ.

ಭಾರತೀಯ ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.ಉಳಿದಂತೆ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ದಾವಣಗೆರೆ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಗದಗ, ಧಾರವಾಡ, ಬೆಳಗಾವಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಸಹ ಮಳೆಯಾಗಲಿದೆ ಎಂದು ಐಎಂಡಿ ಹೇಳಿದೆ.

Leave A Reply

Your email address will not be published.