ಮಂಗಳೂರು:MBBS ವಿದ್ಯಾರ್ಥಿ ಅನುಮಾನಾಸ್ಪದವಾಗಿ ಸಾವು

ಮಂಗಳೂರು: ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

 

ಮೃತ ವಿದ್ಯಾರ್ಥಿಯನ್ನು ಕೇರಳ ಮೂಲದ ಈಡುಕ್ಕಿ ಜಿಲ್ಲೆಯ ನಿವಾಸಿ ರೋಸನ್ ಜೋಸ್ (21) ಎಂದು ಗುರುತಿಸಲಾಗಿದೆ.

ಸೋಮವಾರ ರಾತ್ರಿ ಊಟ ಮಾಡಿ ಕಾಲೇಜು ಹಾಸ್ಟೆಲ್ ರೂಮಿನಲ್ಲಿ ರೋಶನ್ ಮಲಗಿದ್ದು,ಮಂಗಳವಾರ ಬೆಳಗ್ಗೆ ಆತನ ತಂದೆ ಕರೆ ಮಾಡಿದಾಗ ಸ್ವೀಕರಿಸಿರಲಿಲ್ಲ. ಇದರಿಂದ ಗಾಬರಿಗೊಂಡ ತಂದೆ ರೂಮ್ ಪಕ್ಕದಲ್ಲಿರುವ ಮತ್ತೊಬ್ಬ ವಿದ್ಯಾರ್ಥಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.

ತಕ್ಷಣ ಉಳಿದ ವಿದ್ಯಾರ್ಥಿಗಳು ಸೇರಿ ರೂಮ್ ಬಾಗಿಲು ಬಡಿದಾಗ ಯಾವುದೇ ಸ್ಪಂದನೆ ಸಿಗದ ಕಾರಣ,ತಕ್ಷಣ ಹಾಸ್ಟೆಲ್ ಸಿಬ್ಬಂದಿಯ ಗಮನಕ್ಕೆ ತಂದು ಬಾಗಿಲು ಒಡೆದು ಒಳ ನುಗ್ಗಿದ್ದಾರೆ.ಆಗ ವಿದ್ಯಾರ್ಥಿ ಮಲಗಿದ ಸ್ಥಿತಿಯಲ್ಲಿ ಇದ್ದು,ಪರೀಕ್ಷಿಸಿದಾಗ ಮೃತಪಟ್ಟಿರುವುದು ತಿಳಿದು ಬಂದಿದೆ.

ವಿಷಯ ತಿಳಿದ ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಲಾಗಿದೆ.

Leave A Reply

Your email address will not be published.