ವಿಟ್ಲ : ಅಣ್ಣ ತಮ್ಮನ ಜಗಳ ಕೊಲೆಯಲ್ಲಿ ಅಂತ್ಯ!!

ವಿಟ್ಲ: ಸಹೋದರರಿಬ್ಬರ ನಡುವೆ ಹಲವು ದಿನಗಳಿಂದ ನಡೆಯುತ್ತಿದ್ದ ಜಗಳ ಮಂಗಳವಾರದಂದು ( ಮೇ.10) ತಾರಕಕ್ಕೇರಿ ಕೊನೆಗೆ ಕೊಲೆಯಲ್ಲಿ ಕೊನೆಗೊಂಡಿದೆ. ಸಹೋದರರ ನಡುವೆ ನಡೆದ ಗಲಾಟೆಯಲ್ಲಿ ಅಣ್ಣನೇ ತಮ್ಮನನ್ನು ಕೊಲೆ ಮಾಡಿದ ಘಟನೆಯೊಂದು ಶಿರಂಕಲ್ಲು, ನಂದೆರೆಬೆಟ್ಟು ಎಂಬಲ್ಲಿ ನಡೆದಿದೆ.

 

ಕನ್ಯಾನ ನಂದರಬೆಟ್ಟು ನಿವಾಸಿ ಬಾಲಪ್ಪ ನಾಯ್ಕ (35) ಮೃತಪಟ್ಟವರು. ಸಹೋದರ ಐತ್ತಪ್ಪ ನಾಯ್ಕ ಕೊಲೆ ಮಾಡಿದ ಆರೋಪಿ.

ಹೊಸ ಮನೆಯಲ್ಲಿ ಗೋಂದೋಳು ಪೂಜೆ ನಡೆಯುತ್ತಿದ್ದ ಸಂದರ್ಭದಲ್ಲಿ, ಹಳೆ ಮನೆಯಲ್ಲಿ ಸಹೋದರರಿಬ್ಬರ ಮಧ್ಯೆ ಜಗಳವಾಗಿದೆ. ಮಾತಿಗೆ ಮಾತು ಬೆಳೆದು
ಅಣ್ಣ ತಮ್ಮನ್ನನ್ನು ನೊಗದಿಂದ ಹೊಡೆದು ಹತ್ಯೆ ಮಾಡಿದ್ದಾರೆಂದು ತಿಳಿದು ಬಂದಿದೆ.

ಈ ಘಟನೆ ಬೆಳಗ್ಗೆ ನಡೆದಿದ್ದು, ಸಂಬಂಧಿಕರು ಯಾರೂ ದೂರು ಕೊಡಲು ಮುಂದೆ ಬಂದಿಲ್ಲ. ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿದ್ದು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

Leave A Reply

Your email address will not be published.