ಮಂಗಳೂರಿನಿಂದ ಉಡುಪಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಪಲ್ಟಿ !! | ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಯಾಣಿಕರು ಪಾರು

ಮಂಗಳೂರಿನಿಂದ ಉಡುಪಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಉಡುಪಿಯ ಉದ್ಯಾವರ ಜಂಕ್ಷನ್ ಬಳಿ ನಡೆದಿದೆ.

ಬಸ್ ನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಇಲ್ಲದೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಡಿವೈಡರ್ ಗೆ ಹಾರಿ ಪಲ್ಟಿಯಾಗಿದೆ ಎನ್ನಲಾಗಿದೆ.

Leave A Reply

Your email address will not be published.