ಕರ್ನಾಟಕದ ನಾಲ್ಕು ‘ರಾಜ್ಯಸಭಾ ಸ್ಥಾನ’ ಗಳಿಗೆ ಚುನಾವಣೆ ದಿನಾಂಕ ಘೋಷಣೆ|

ಕರ್ನಾಟಕದ ವಿಧಾನಪರಿಷತ್ ಚುನಾವಣೆಗೆ ದಿನಾಂಕ ಪ್ರಕಟವಾದ ಬೆನ್ನಲ್ಲೇ ಇದೀಗ ರಾಜ್ಯಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ.

30-06-2022 ರಂದು  ನಿವೃತ್ತಿಯಾಗಲಿರುವಂತ ಕರ್ನಾಟಕದಿಂದ ರಾಜ್ಯಸಭೆಗೆ  ಆಯ್ಕೆಯಾಗಿದ್ದಂತ ನಾಲ್ಕು ಸ್ಥಾನಗಳು ಸೇರಿದಂತೆ ದೇಶದ 15 ರಾಜ್ಯಗಳ 57 ರಾಜ್ಯ ಸಭಾ ಸ್ಥಾನಗಳಿಗೆ ಚುನಾವಣಾ ಆಯೋಗದಿಂದ ಚುನಾವಣೆ ಘೋಷಣೆ ಮಾಡಲಾಗಿದೆ.


Ad Widget

Ad Widget

Ad Widget

ರಾಜ್ಯದ 4 ಸ್ಥಾನಗಳಿಗೆ ಜೂನ್ 10 ರಂದು ಚುನಾವಣೆ ನಡೆಯಲಿದ್ದು, ಅಂದೇ (ಜೂನ್ 10) ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ. ನಿರ್ಮಲಾ ಸೀತಾರಾಮನ್, ಕೆ.ಸಿ. ರಾಮಮೂರ್ತಿ, ಜೈರಾಂ ರಮೇಶ್ ನಿವೃತ್ತಿ ಹಾಗೂ ಈಗಾಗಲೇ ಆಸ್ಕರ್ ಫರ್ನಾಂಡೀಸ್ ನಿಧನದಿಂದ ತೆರವಾಗಿರುವ ಒಂದು ಸ್ಥಾನ ಸೇರಿದಂತೆ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಮೇ 31 ಕೊನೆಯ ದಿನವಾಗಿದೆ.

ಈ ಸಂಬಂಧ ಚುನಾವಣಾ ಆಯೋಗ ಆದೇಶ ಹೊರಡಿಸಿದ್ದು, ದಿನಾಂಕ 30-06-2022ರಂದು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಂತ ಕೆಸಿ ರಾಮಮೂರ್ತಿ, ಜೈರಾಂ ರಮೇಶ್, ಆಸ್ಕರ್ ಫರ್ನಾಂಡಿಸ್, ನಿರ್ಮಲಾ ಸೀತಾರಾಮನ್ ಅವರು ನಿವೃತ್ತಿ ಹೊಂದಲಿದ್ದಾರೆ. ಈ ಸ್ಥಾನಗಳಿಗೆ ದಿನಾಂಕ 10-06-2022ರಂದು ಚುನಾವಣೆ ನಿಗದಿಗೊಳಿಸಲಾಗಿದೆ.

ಮೇ 24ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತಿದೆ.
ಮೇ 31ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ.
ಜೂ. 01ರಂದು ನಾಮಪತ್ರಗಳ ಪರಿಶೀಲನೆ ಪ್ರಕ್ರಿಯೆ.
ಜೂನ್ 03ರಂದು ನಾಮಪತ್ರಗಳನ್ನು ವಾಪಾಸ್ ಪಡೆಯಲು ಕೊನೆಯ ದಿನ.
ಜೂನ್ 10 ರಂದು ಮತದಾನ (ಬೆಳಿಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ)
ಅಂದೇ ಸಂಜೆ 5 ಗಂಟೆಗೆ ಮತ ಎಣಿಕೆ.

ಇನ್ನೂ ಕರ್ನಾಟಕದ 2 ಪದವೀಧರ ಹಾಗೂ 2 ಶಿಕ್ಷಕರ ಕ್ಷೇತ್ರಗಳ ಸ್ಥಾನಗಳಿಗೆ ಚುನಾವಣೆಗೆ ದಿನಾಂಕ ಪ್ರಕಟವಾಗಿದೆ.  ವಾಯುವ್ಯ ಪದವೀಧರ ಕ್ಷೇತ್ರದ ನಿರಾಣಿ ಹನುಮಂತಪ್ಪ ರುದ್ರಪ್ಪ, ದಕ್ಷಿಣ ಪದವೀಧರ ಕ್ಷೇತ್ರದ ಕೆ.ಟಿ ಶ್ರೀಕಂಠೇಗೌಡ ಅವರ ಅವಧಿ ಜುಲೈ 4ಕ್ಕೆ ಮುಗಿಯಲಿದೆ. ಈ ಸ್ಥಾನಗಳಿಗೆ ಇದೇ ಜೂನ್ 13ರಂದು ಚುನಾವಣೆ ನಡೆಯಲಿದೆ.

ಮೇ 26 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ.
ಮೇ. 27ರಂದು ನಾಮಪತ್ರಗಳ ಪರಿಶೀಲನೆ.
ಇನ್ನು ಮೇ. 30 ರಂದು ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನ.
ಜೂನ್, 13ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ.
ಜೂ.15 ಫಲಿತಾಂಶ ಪ್ರಕಟ.

Leave a Reply

error: Content is protected !!
Scroll to Top
%d bloggers like this: