ಚುನಾವಣೆ ವಿಚಾರಕ್ಕೆ ವೈದ್ಯಕೀಯ ವಿದ್ಯಾರ್ಥಿಗಳ ನಡುವೆ ಮಾರಾಮಾರಿ !! | 15 ವಿದ್ಯಾರ್ಥಿಗಳ ವಿರುದ್ಧ ಎಫ್ಐಆರ್ ದಾಖಲು

ಚುನಾವಣೆ ವಿಚಾರವಾಗಿ ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿಗಳ ಮಧ್ಯೆಯೇ ಮಾರಾಮಾರಿ ನಡೆದಿರುವ ಘಟನೆ ಬೆಳಗಾವಿಯ ಬೀಮ್ಸ್ ಕಾಲೇಜಿನಲ್ಲಿ ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿ 15 ವಿದ್ಯಾರ್ಥಿಗಳ ಮೇಲೆ ಎಫ್‍ಐಆರ್ ದಾಖಲಾಗಿದೆ.

 

ಬೀಮ್ಸ್ ಕಾಲೇಜಿನಲ್ಲಿ ಮೆಡಿಕಲ್ ವಿದ್ಯಾರ್ಥಿಗಳು ಕಾಲೇಜು ಚುನಾವಣಾ ವಿಷಯಕ್ಕೆ ಗಲಾಟೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಗಲಾಟೆಯಲ್ಲಿ ಎಂಬಿಬಿಎಸ್ ನಾಲ್ಕನೇ ವರ್ಷದ ವಿದ್ಯಾರ್ಥಿಗಳು ರಾಜಸ್ತಾನ ಮೂಲದ ವಿದ್ಯಾರ್ಥಿ ಬುರಾರಾಮ್ ಗೋಧರೆ ಎಂಬವರ ಮೇಲೆ ತೀವ್ರವಾಗಿ ಹಲ್ಲೆ ಮಾಡಿದ್ದಾರೆ.

ತೀವ್ರ ಹಲ್ಲೆಗೆ ಒಳಗಾಗಿದ್ದ ಬುರಾರಾಮ್ ಅವರ ಮೂಗು ಹಾಗೂ ಕಿರುಬೆರಳಿಗೆ ಗಾಯವಾಗಿದ್ದು, ಮೂಗಿನ ಶಸ್ತ್ರ ಚಿಕಿತ್ಸೆಗೆ ರಾಜಸ್ತಾನದ ಏಮ್ಸ್ ಜೋಧಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಕಾಲೇಜಿನಲ್ಲಿ ಗಲಾಟೆ ಆಗಿರುವ ಸಂಬಂಧ ಬೀಮ್ಸ್ ಆಡಳಿತಾಧಿಕಾರಿಯಿಂದ ಎಪಿಎಂಸಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ದೂರಿನ ಮೇರೆಗೆ 15 ಎಂಬಿಬಿಎಸ್ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಾಗಿದೆ.

Leave A Reply

Your email address will not be published.